alex Certify
ಕನ್ನಡ ದುನಿಯಾ       Mobile App
       

Kannada Duniya

ಮಾಜಿ ಮುಖ್ಯಮಂತ್ರಿಗೆ ಜೈಲೂಟ ಗ್ಯಾರಂಟಿ

ನವದೆಹಲಿ: ಬಹುಕೋಟಿ ಕಲ್ಲಿದ್ದಲು ಹಗರಣದಲ್ಲಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧು ಕೋಡಾ ಅಪರಾಧಿ ಎಂದು ಸಿ.ಬಿ.ಐ. ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಮಧು ಕೋಡಾ, ಕಲ್ಲಿದ್ದಲು ಖಾತೆಯ ಮಾಜಿ ಕಾರ್ಯದರ್ಶಿ ಹೆಚ್.ಸಿ. ಗುಪ್ತಾ ಸೇರಿದಂತೆ 7 ಮಂದಿಯನ್ನು ಅಪರಾಧಿಗಳೆಂದು ಕೋರ್ಟ್ ಪರಿಗಣಿಸಿದೆ.

ಜಾರ್ಖಂಡ್ ನಲ್ಲಿ ನಡೆದ ಬಹುಕೋಟಿ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ, ಸಿ.ಬಿ.ಐ. ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ ಸಿ.ಬಿ.ಐ. ಕೋರ್ಟ್ ಇಂದು ತೀರ್ಪು ಪ್ರಕಟಿಸುವುದಾಗಿ ಹೇಳಿತ್ತು.

ಅದರಂತೆ ಸಿ.ಬಿ.ಐ. ಕೋರ್ಟ್ ತೀರ್ಪು ಪ್ರಕಟಿಸಿದ್ದು, ಮಧು ಕೋಡಾ, ಹೆಚ್.ಸಿ. ಗುಪ್ತಾ ಸೇರಿ 7 ಮಂದಿಯನ್ನು ಬಹುಕೋಟಿ ಕಲ್ಲಿದ್ದಲು ಹಗರಣದಲ್ಲಿ ದೋಷಿಗಳೆಂದು ಪರಿಗಣಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...