alex Certify
ಕನ್ನಡ ದುನಿಯಾ       Mobile App
       

Kannada Duniya

ಟೋಲ್ ನಲ್ಲಿ 2.5 ಕೋಟಿ ರೂ. ದೋಚಿದ ದುಷ್ಕರ್ಮಿಗಳು

shooting-989

ನವದೆಹಲಿಯಲ್ಲಿ ಇತ್ತೀಚೆಗೆ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಪೂರಕ ಎನ್ನುವಂತಹ ಘಟನೆಯೊಂದು ಮರುಕಳಿಸಿದೆ. ಇಲ್ಲಿನ ಟೋಲ್ ಗೇಟ್ ಒಂದರಲ್ಲಿ ಅಟ್ಟಹಾಸ ಮೆರೆದಿರುವ ದುಷ್ಕರ್ಮಿಗಳು 2.5 ಕೋಟಿ ರೂ. ದೋಚಿ ಪರಾರಿಯಾಗಿದ್ದಾರೆ.

ನವದೆಹಲಿಯ ಬದರ್ ಪುರ್ ನಲ್ಲಿ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಟೋಲ್ ಗೇಟ್ ಪ್ಲಾಜಾಕ್ಕೆ ನುಗ್ಗಿದ್ದು, ಗನ್ ತೋರಿಸಿ ಹಣ ಕೊಡುವಂತೆ ಬೆದರಿಸಿದ್ದಾರೆ. ಅಲ್ಲಿನ ಸಿಬ್ಬಂದಿ ನಿರಾಕರಿಸಿದಾಗ ಗುಂಡು ಹಾರಿಸಿದ್ದು, ಇಬ್ಬರು ಸಿಬ್ಬಂದಿ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಆಗ 2.5 ಕೋಟಿ ರೂಪಾಯಿ ಹಣ ದೋಚಿ ಪರಾರಿಯಾಗಿದ್ದಾರೆ. ಗುಂಡಿನ ದಾಳಿಯಿಂದಾಗಿ ಕ್ಯಾಷಿಯರ್ ಹಾಗೂ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದು, ನಾಲ್ಕೈದು ಮಂದಿಗೆ ಗಾಯಗಳಾಗಿವೆ.

ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದರು. ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಸಿಬ್ಬಂದಿ ಭೇಟಿ ನೀಡಿ ಮಾಹಿತಿ ಕಲೆ ಹಾಕಿದರು. ಹಣ ದೋಚಿ ಪರಾರಿಯಾಗಿರುವ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಕ್ರಮಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...