alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯ ರಾಜಕಾರಣದ ಚಿತ್ತ ಈಗ ಸುಪ್ರೀಂ ಕೋರ್ಟಿನತ್ತ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಬಿ.ಎಸ್. ಯಡಿಯೂರಪ್ಪನವರು ಪ್ರಮಾಣವಚನ ಸ್ವೀಕರಿಸಿರುವರಾದರೂ ಅವರ ಆತಂಕವೇನೂ ಕಡಿಮೆಯಾಗಿಲ್ಲ.

ಬಹುಮತ ಸಾಬೀತುಪಡಿಸಲು ಶಾಸಕರ ಸಂಖ್ಯಾಬಲ ಹೆಚ್ಚಿಸಿಕೊಳ್ಳುವ ಅನಿವಾರ್ಯತೆಯಲ್ಲಿರುವ ಮಧ್ಯೆ ಬಿಜೆಪಿಗೆ ಸರ್ಕಾರ ರಚಿಸಲು ರಾಜ್ಯಪಾಲರು ಆಹ್ವಾನ ನೀಡಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್-ಜೆಡಿಎಸ್ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ನಡೆಯಲಿರುವ ಹಿನ್ನಲೆಯಲ್ಲಿ ತೀರ್ಪು ಏನಾಗುವುದೋ ಎಂಬ ಆತಂಕವೂ ಬಿಜೆಪಿ ಪಾಳೆಯವನ್ನು ಕಾಡತೊಡಗಿದೆ.

ರಾಜಭವನದಿಂದ ಪ್ರಮಾಣವಚನ ಸ್ವೀಕಾರ ಸಮಾರಂಭದ ಪ್ರಕಟಣೆ ಹೊರ ಬೀಳುತ್ತಿದ್ದಂತೆಯೇ ಅಂದು ರಾತ್ರಿಯೇ ಅರ್ಜಿಯನ್ನು ಸಲ್ಲಿಸಲಾಗಿದ್ದು, ಬೆಳಗಿನ ಜಾವದವರೆಗೂ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ರಾಜ್ಯಪಾಲರ ತೀರ್ಮಾನದ ಕುರಿತು ಮಧ್ಯ ಪ್ರವೇಶಿಸಲು ನಿರಾಕರಿಸಿದ್ದರೂ ಮುಂದಿನ ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು.

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಯಡಿಯೂರಪ್ಪ ಸ್ಥಾನಕ್ಕೆ ಸದ್ಯಕ್ಕೆ ತೊಂದರೆಯಿಲ್ಲವಾದರೂ ಇಂದಿನ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಬಹುಮತ ಸಾಬೀತುಪಡಿಸುವ ಅವಧಿಯನ್ನು ನಿಗದಿಪಡಿಸಿದರೆ ಬಿಜೆಪಿಗೆ ಸಂಕಷ್ಟ ಎದುರಾಗಲಿದೆ. ರಾಜ್ಯಪಾಲರು 15 ದಿನಗಳ ಕಾಲಾವಕಾಶ ನೀಡಿದ್ದು, ಸುಪ್ರೀಂ ಕೋರ್ಟ್ ಇದನ್ನೇ ಅಂತಿಮಗೊಳಿಸುತ್ತೋ ಅಥವಾ ಅವಧಿಯನ್ನು ಕಡಿತಗೊಳಿಸುತ್ತೋ ಎಂಬುದರ ಮೇಲೆ ಯಡಿಯೂರಪ್ಪ ಸರ್ಕಾರದ ಭವಿಷ್ಯ ನಿಂತಿದೆ.

ಕಾಂಗ್ರೆಸ್ ಹಾಗೂ ಜೆಡಿಎಸ್ ನ ಹಲವು ಶಾಸಕರು ತಮ್ಮ ಬೆಂಬಲಕ್ಕೆ ನಿಲ್ಲಲಿದ್ದಾರೆಂಬ ಆತ್ಮವಿಶ್ವಾಸವನ್ನು ಬಿಜೆಪಿ ನಾಯಕರು ಬಹಿರಂಗವಾಗಿ ವ್ಯಕ್ತಪಡಿಸುತ್ತಿದ್ದರಾದರೂ ಒಳಗೊಳಗೆ ಆತಂಕ ಕಾಡುತ್ತಿರುವುದಂತೂ ಸುಳ್ಳಲ್ಲ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...