alex Certify
ಕನ್ನಡ ದುನಿಯಾ       Mobile App
       

Kannada Duniya

ಶ್ರೀನಗರ ಸೇರಿ 3 ಜಿಲ್ಲೆಯಲ್ಲಿ ಕರ್ಫ್ಯೂ

srinagr

ಶ್ರೀನಗರ: ಲಷ್ಕರ್ ಕಮಾಂಡರ್ ಜುನೈದ್ ಮಟ್ಟು ಸೇರಿದಂತೆ ಮೂವರು ಭಯೋತ್ಪಾದಕರನ್ನು ಸೇನೆ ಹೊಡೆದುರುಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದೆ.

ಶುಕ್ರವಾರ ಬೆಳಿಗ್ಗೆ ಅನಂತ ನಾಗ್ ಜಿಲ್ಲೆಯ ಅರ್ವಾನಿ ಗ್ರಾಮದಲ್ಲಿ ಸೇನೆ ಕಾರ್ಯಾಚರಣೆ ನಡೆಸಿ, ಮನೆಯೊಂದರಲ್ಲಿ ಅವಿತಿದ್ದ ಉಗ್ರರನ್ನು ಹತ್ಯೆ ಮಾಡಲಾಗಿತ್ತು.

ಹತ್ಯೆಯಾದ 24 ಗಂಟೆಗಳ ನಂತರ ಉಗ್ರರ ಬಳಿ ಇದ್ದ 2 ಎ.ಕೆ. 47 ಗನ್, 6 ಮ್ಯಾಗ್ ಜಿನ್ ವಶಕ್ಕೆ ಪಡೆಯಲಾಗಿದೆ.

ಈ ಉಗ್ರರ ಹತ್ಯೆಗೆ ಪ್ರತೀಕಾರವಾಗಿ ಭಯೋತ್ಪಾದಕರು ದಾಳಿ ನಡೆಸಿ, 6 ಮಂದಿ ಪೊಲೀಸರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಪರಿಸ್ಥಿತಿ ನಿಯಂತ್ರಣಕ್ಕಾಗಿ ಶ್ರೀನಗರದ 6 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಅನಂತ್ ನಾಗ್, ಕುಲ್ಗಾಂ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಜಮ್ಮು ಮತ್ತು ಕಾಶ್ಮೀರದಾದ್ಯಂತ ಪ್ಯಾರಾ ಮಿಲಿಟರಿ ಪಡೆಯನ್ನು ನಿಯೋಜಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...