alex Certify
ಕನ್ನಡ ದುನಿಯಾ       Mobile App
       

Kannada Duniya

ಕೇಂದ್ರ ಸರ್ಕಾರಿ ನೌಕರರಿಗೆ ಸಿಕ್ತು ಭರ್ಜರಿ ಹೋಳಿ ಗಿಫ್ಟ್

da rise

ಹೋಳಿಹಬ್ಬದ ಸಂದರ್ಭದಲ್ಲಿಯೇ ಸರ್ಕಾರಿ ನೌಕರರಿಗೆ ಕೊಡುಗೆ ಸಿಕ್ಕಿದೆ. ನೌಕರರು ನಿರೀಕ್ಷೆಯಲ್ಲಿ ಇದ್ದಂತೆ ಡಿಎ ಹೆಚ್ಚಳ ಮಾಡಲಾಗಿದೆ. ಹೋಳಿ ಹಬ್ಬದ ಕೊಡುಗೆಯಾಗಿ ಕೇಂದ್ರ ಸರ್ಕಾರಿ ನೌಕರರಿಗೆ ಶೇ.6 ರಷ್ಟು ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಲಾಗಿದೆ.

ಪ್ರಸ್ತುತ ಶೇ. 119 ರಷ್ಟು ಇರುವ ತುಟ್ಟಿಭತ್ಯೆಯನ್ನು, ಶೇ.125ಕ್ಕೆ ಹೆಚ್ಚಿಸಲು, ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರದ ನೌಕರರು, ನಿವೃತ್ತ ನೌಕರರಿಗೆ ಶೇ. 6ರಷ್ಟು ತುಟ್ಟಿಭತ್ಯೆ ಪ್ರಯೋಜನ ಸಿಗಲಿದ್ದು, ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಯಾಗಲಿದೆ. ತುಟ್ಟಿ ಭತ್ಯೆ ಹೆಚ್ಚಳದಿಂದಾಗಿ ಕೇಂದ್ರ ಸರ್ಕಾರಕ್ಕೆ ವಾರ್ಷಿಕ ಸುಮಾರು 14,724 ಕೋಟಿ ರೂ. ಹೊರೆ ಬೀಳಲಿದೆ ಎನ್ನಲಾಗಿದೆ.

50 ಲಕ್ಷ ಕೇಂದ್ರ ಸರ್ಕಾರಿ ನೌಕರರು, 58 ಲಕ್ಷ ನಿವೃತ್ತ ನೌಕರರು ಶೇ.6ರಷ್ಟು ತುಟ್ಟಿಭತ್ಯೆಯ ಪ್ರಯೋಜನ ಪಡೆಯಲಿದ್ದಾರೆ. ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ನೌಕರರಿಗೆ ತುಟ್ಟಿಭತ್ಯೆ ನೀಡಲಾಗುವುದು ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...