alex Certify
ಕನ್ನಡ ದುನಿಯಾ       Mobile App
       

Kannada Duniya

ಪೊಲೀಸ್ ವಿರುದ್ಧವೇ ದಾಖಲಾಯ್ತು ಕೊಲೆ ಪ್ರಕರಣ

kanpur-dalit-death

ಕಾನ್ಪುರ್: ಠಾಣೆಯಲ್ಲಿ ಪೊಲೀಸ್ ವಶದಲ್ಲಿದ್ದ ವ್ಯಕ್ತಿಯೊಬ್ಬ, ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆಯ ಎಲ್ಲಾ ಪೊಲೀಸರನ್ನು ಸಸ್ಪೆಂಡ್ ಮಾಡಲಾಗಿದೆ. ಅಲ್ಲದೇ, ಓರ್ವ ಪೊಲೀಸ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ.

ಉತ್ತರ ಪ್ರದೇಶದ ಕಾನ್ಪುರ್ ದಲ್ಲಿರುವ ಠಾಣೆಯೊಂದರಲ್ಲಿ ದಲಿತ ವ್ಯಕ್ತಿಯೊಬ್ಬನನ್ನು ಪೊಲೀಸರು ವಿಚಾರಣೆಗೆ ಕರೆತಂದಿದ್ದು, ಆತ ಅನುಮಾನಾಸ್ಪದವಾಗಿ ಸಾವು ಕಂಡಿದ್ದಾನೆ. 25 ವರ್ಷದ ಕಮಲ್ ವಾಲ್ಮೀಕಿ ಎಂಬ ವ್ಯಕ್ತಿಯನ್ನು ಪೊಲೀಸರು ವಿಚಾರಣೆಗೆ ಕರೆತಂದಿದ್ದಾರೆ. 2 ದಿನಗಳಿಂದ ಠಾಣೆಯಲ್ಲೇ ಇದ್ದ ಕಮಲ್ ವಾಲ್ಮೀಕಿ ಶವ ಪೊಲೀಸ್ ಠಾಣೆಯ ಲಾಕಪ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತನನ್ನು ಪೊಲೀಸರೇ ಥಳಿಸಿ ಕೊಲೆ ಮಾಡಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಪ್ರಕರಣದ ತನಿಖೆ ನಡೆಸಿದ ಹಿರಿಯ ಪೊಲೀಸ್ ಅಧಿಕಾರಿಗಳು, ಠಾಣೆಯ ಎಲ್ಲಾ 14 ಪೊಲೀಸರನ್ನು ಸಸ್ಪೆಂಡ್ ಮಾಡಿದ್ದು, ಇನ್ಸ್ ಪೆಕ್ಟರ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ. ದಲಿತ ವ್ಯಕ್ತಿಯ ಲಾಕಪ್ ಡೆತ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...