alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಲೆಯ ತಾರತಮ್ಯ ಪ್ರಶ್ನಿಸಿ ಕೋರ್ಟ್ ಮೊರೆ ಹೋದ ಮಹಿಳೆ

ತಮಿಳುನಾಡಿನಲ್ಲಿ ದಲಿತ ವಿದ್ಯಾರ್ಥಿಯಿಂದ ಶಾಲೆ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣ ಈಗ ಕೋರ್ಟ್ ಮೆಟ್ಟಿಲೇರಿದೆ. ಮದ್ರಾಸ್ ಹೈಕೋರ್ಟ್ ನಲ್ಲಿ ದಲಿತ ವಿದ್ಯಾರ್ಥಿನಿ ತಾಯಿ ಅರ್ಜಿ ಸಲ್ಲಿಸಿದ್ದಾರೆ. ಮಗಳು ಸೇರಿದಂತೆ ದಲಿತ ವಿದ್ಯಾರ್ಥಿಗಳಿಂದ ಶಾಲೆಯ ಶೌಚಾಲಯ ಸ್ವಚ್ಛಗೊಳಿಸಿದ್ದು, ನ್ಯಾಯ ಕೊಡಿಸುವಂತೆ ಕೋರ್ಟ್ ನಲ್ಲಿ ಮಹಿಳೆ ಅರ್ಜಿ ಸಲ್ಲಿಸಿದ್ದಾರೆ.

ಫೆಬ್ರವರಿಯಲ್ಲಿ ದಲಿತ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣ ಬಹಿರಂಗವಾಗಿತ್ತು. ಶಾಲೆ ಆಡಳಿತ ಮಂಡಳಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು. ಈಗ ಮಹಿಳೆ ಕೋರ್ಟ್ ಮೆಟ್ಟಿಲೇರಿದ್ದಾರೆ. ಎಸ್ಸಿ ವಿದ್ಯಾರ್ಥಿಗಳನ್ನು ಶಾಲೆಯಲ್ಲಿ ಕೀಳಾಗಿ ನೋಡಲಾಗ್ತಿದೆ ಎಂದು ಮಹಿಳೆ ದೂರಿದ್ದಾರೆ.

ಶೌಚಾಲಯ ಸ್ವಚ್ಛಗೊಳಿಸುವ ಜೊತೆಗೆ ವಾಟರ್ ಟ್ಯಾಂಕ್ ಹಾಗೂ ಶಿಕ್ಷಕರ ಟಿಫನ್ ಬಾಕ್ಸ್ ಗಳನ್ನು ವಿದ್ಯಾರ್ಥಿಗಳು ತೊಳೆಯಬೇಕು. ಕೆಲಸ ಮಾಡದೆ ಹೋದಲ್ಲಿ ಉಳಿದ ವಿದ್ಯಾರ್ಥಿಗಳು ಬೆದರಿಸುತ್ತಾರೆಂದು ಮಹಿಳೆ ದೂರಿದ್ದಾರೆ. ಈ ಬಗ್ಗೆ ಸರ್ಕಾರಿ ಶಾಲೆ ಶಿಕ್ಷಕರು ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...