alex Certify
ಕನ್ನಡ ದುನಿಯಾ       Mobile App
       

Kannada Duniya

ಯುಪಿ ಸಿಎಂ ಯೋಗಿ ಆದಿತ್ಯನಾಥ್ ಗೆ ಸ್ವಪಕ್ಷೀಯ ಸಂಸದೆಯಿಂದಲೇ ‘ಶಾಕ್’

ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೀಡಿದ ಹೇಳಿಕೆಯೊಂದು ವಿವಾದಕ್ಕೆ ಕಾರಣವಾಗಿತ್ತು. ಹನುಮಂತ ಒಬ್ಬ ಅರಣ್ಯವಾಸಿ. ಆತ ದಲಿತ ಎಂದು ಆದಿತ್ಯನಾಥ್ ನೀಡಿದ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ದೇವರನ್ನು ಜಾತಿಯೊಂದಕ್ಕೆ ಸೀಮಿತಗೊಳಿಸಿ ಆದಿತ್ಯನಾಥ್ ಹೇಳಿಕೆ ನೀಡಿದ್ದಾರೆಂದು ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿರುವ ಮಧ್ಯೆ, ಬಿಜೆಪಿ ಸಂಸದೆಯೊಬ್ಬರು ನೀಡಿರುವ ಹೇಳಿಕೆ ಈಗ ಮಹತ್ವ ಪಡೆದುಕೊಂಡಿದೆ.

ಬಹರೈಚ್ ಕ್ಷೇತ್ರದ ಸಂಸದೆ ಸಾವಿತ್ರಿ ಬಾಯಿ ಫುಲೆ, ಹನುಮಂತ ದಲಿತ ಮತ್ತು ಆತ ಮನುವಾದಿಗಳ ಜೀತದಾಳಾಗಿದ್ದ ಎಂಬ ಹೇಳಿಕೆ ನೀಡಿದ್ದು, ಇದು ಬಿಜೆಪಿ ನಾಯಕರಿಗೆ ತೀವ್ರ ಇರುಸುಮುರುಸನ್ನುಂಟು ಮಾಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...