alex Certify
ಕನ್ನಡ ದುನಿಯಾ       Mobile App
       

Kannada Duniya

ಮದುವೆ ಹಿಂದಿನ ದಿನ ವರನ ವಿರುದ್ದ ದಾಖಲಾಯ್ತು ರೇಪ್ ದೂರು

Facebook 445788ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪರಿಚಿತಳಾಗಿದ್ದ ಯುವತಿಗೆ ಮದುವೆಯಾಗುವ ಆಮಿಷವೊಡ್ಡಿ ಅತ್ಯಾಚಾರವೆಸಗಿ ಈಗ ಮತ್ತೊಬ್ಬಳೊಂದಿಗೆ ಮದುವೆಯಾಗಲು ಮುಂದಾಗಿದ್ದ ಐಎಫ್ಎಸ್ ಅಧಿಕಾರಿಯ ವಿರುದ್ದ ಅತ್ಯಾಚಾರ ಪ್ರಕರಣ ದಾಖಲಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಪುದುಚೇರಿಯಲ್ಲಿ ವಿಭಾಗೀಯ ಅರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಸತ್ಯಮೂರ್ತಿಯವರ ವಿರುದ್ದ ಚೆನ್ನೈನ ವಡಪಳನಿಯಲ್ಲಿರುವ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿರುವ ಕಾನೂನು ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ, 2015 ರ ಜನವರಿಯಲ್ಲಿ ಫೇಸ್ ಬುಕ್ ನಲ್ಲಿ ಪರಿಚಿತರಾಗಿದ್ದ ಸತ್ಯಮೂರ್ತಿ, ತಮ್ಮನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದಾರಲ್ಲದೇ ತಮ್ಮಿಂದ 5 ಲಕ್ಷ ರೂ. ಹಣ ಪಡೆದುಕೊಂಡಿರುವುದಾಗಿ ದೂರಿದ್ದಾರೆ.

ಈ ವರ್ಷದ ಫೆಬ್ರವರಿಯಲ್ಲಿ ವಡಪಳನಿಯಲ್ಲಿನ ಹೋಟೆಲ್ ಒಂದರಲ್ಲಿ ತಮ್ಮನ್ನು ಭೇಟಿ ಮಾಡಿದ ಸತ್ಯಮೂರ್ತಿ, ತಾವಿಬ್ಬರೂ ಜೊತೆಗಿದ್ದ ಫೋಟೋಗಳನ್ನು ಡಿಲಿಟ್ ಮಾಡಿಸಿದರಲ್ಲದೇ ಹಣ ವಾಪಾಸ್ ನೀಡುವುದಿಲ್ಲವೆಂದು ಹೇಳಿದ್ದಾರೆ. ಜೊತೆಗೆ ತಮ್ಮ ವಿರುದ್ದ ಪೊಲೀಸರಿಗೆ ದೂರು ನೀಡಲು ಮುಂದಾದರೆ ತೊಂದರೆ ಎದುರಿಸಬೇಕಾಗುತ್ತದೆಂದು ಬೆದರಿಸಿದ್ದಾರೆಂದು ವಿವರಿಸಿದ್ದಾರೆ.

ವಡಪಳನಿ ಮಹಿಳಾ ಠಾಣೆ ಪೊಲೀಸರು, ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡಿದ್ದು, ಸತ್ಯಮೂರ್ತಿಯವರ ವಿವಾಹ ಸೇಲಂ ಮೂಲದ ಯುವತಿ ಜೊತೆ ಇಂದು ನಡೆಯಬೇಕಾಗಿತ್ತೆಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...