alex Certify
ಕನ್ನಡ ದುನಿಯಾ       Mobile App
       

Kannada Duniya

ಗುಜರಾತ್ ನಲ್ಲಿ 100 ಕ್ಕೇರಿದ ಬಿ.ಜೆ.ಪಿ. ಬಲ

ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ 2 ದಿನಗಳ ಬಳಿಕ ಬಿ.ಜೆ.ಪಿ. ತನ್ನ ಸಂಖ್ಯೆಯನ್ನು 100 ಕ್ಕೆ ಹೆಚ್ಚಿಸಿಕೊಂಡಿದೆ.

99 ಸ್ಥಾನ ಗಳಿಸಿ ಅಧಿಕಾರಕ್ಕೆ ಬಂದಿರುವ ಬಿ.ಜೆ.ಪಿ.ಗೆ ಪಕ್ಷೇತರ ಶಾಸಕರೊಬ್ಬರು ಬೆಂಬಲ ಸೂಚಿಸಿದ್ದಾರೆ. ಕಾಂಗ್ರೆಸ್ ನಿಂದ ಹೊರ ಹಾಕಲ್ಪಟ್ಟು ಪಕ್ಷೇತರರಾಗಿ ಸ್ಪರ್ಧಿಸಿ ಚುನಾಯಿತರಾಗಿದ್ದ ರತನ್ ಸಿಂಗ್ ರಾಥೋಡ್ ಬಿ.ಜೆ.ಪಿ.ಗೆ ಬೇಷರತ್ ಬೆಂಬಲ ಘೋಷಿಸಿದ್ದಾರೆ.

182 ಸದಸ್ಯ ಬಲದ ಗುಜರಾತ್ ವಿಧಾನಸಭೆಯಲ್ಲಿ ಬಿ.ಜೆಪಿ. 99 ಸ್ಥಾನ ಗಳಿಸಿದೆ. ರಾಥೋಡ್ ಬೆಂಬಲದಿಂದ ಆಡಳಿತ ಪಕ್ಷದ ಶಾಸಕರ ಸಂಖ್ಯೆ 100 ಕ್ಕೆ ಏರಿಕೆಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...