alex Certify
ಕನ್ನಡ ದುನಿಯಾ       Mobile App
       

Kannada Duniya

ಈಕೆ ಚಿನ್ನವಿಟ್ಟುಕೊಂಡಿದ್ದ ಪರಿ ಕಂಡು ದಂಗಾದ ಅಧಿಕಾರಿಗಳು

gold-ind

ನವದೆಹಲಿ: ಚಿನ್ನಕ್ಕೆ ಬೇಡಿಕೆ ಹೆಚ್ಚಾಗಿರುವುದರಿಂದ, ಅಕ್ರಮವಾಗಿ ಸಾಗಿಸುವವರ ಸಂಖ್ಯೆ ಕೂಡ ಹೆಚ್ಚಿದೆ. ಹೇಗೆಲ್ಲಾ ಚಿನ್ನವನ್ನು ಬಚ್ಚಿಟ್ಟುಕೊಂಡು ಸಾಗಿಸುತ್ತಾರೆ ಎಂಬುದನ್ನು ಸಾಮಾನ್ಯವಾಗಿ ಓದಿರುತ್ತೀರಿ.

ದೆಹಲಿ ವಿಮಾನ ನಿಲ್ದಾಣದಲ್ಲಿ ಮಹಿಳೆಯೊಬ್ಬಳನ್ನು ಬಂಧಿಸಿರುವ ಕಸ್ಟಮ್ಸ್ ಅಧಿಕಾರಿಗಳು, ಆಕೆ ಚಿನ್ನ ಬಚ್ಚಿಟ್ಟುಕೊಂಡಿದ್ದ ಪರಿ ನೋಡಿ ದಂಗಾಗಿದ್ದಾರೆ. ಮಹಿಳೆ ಒಳ ಉಡುಪಿನಲ್ಲಿ ಬರೋಬ್ಬರಿ 61.37 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಬಚ್ಚಿಟ್ಟುಕೊಂಡಿದ್ದಳು. ಅದರಲ್ಲಿ ಚಿನ್ನದ ಗಟ್ಟಿಗಳು, ವಿವಿಧ ಆಭರಣಗಳು ಇದ್ದವು. ಒಳ ಉಡುಪಿನಲ್ಲಿದ್ದ ರಹಸ್ಯವಾದ ಜೇಬುಗಳಲ್ಲಿ ಆಕೆ ಚಿನ್ನ ಅಡಗಿಸಿಟ್ಟುಕೊಂಡಿದ್ದಳು ಎಂದು ಕಸ್ಟಮ್ಸ್ ಅಧಿಕಾರಿ ತಿಳಿಸಿದ್ದಾರೆ.

ದುಬೈನಿಂದ ನವದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮಹಿಳೆ, ಅನುಮಾನಾಸ್ಪದ ವರ್ತನೆ ತೋರಿದ್ದು, ಆಗ ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಚಿನ್ನ ಪತ್ತೆಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...