alex Certify
ಕನ್ನಡ ದುನಿಯಾ       Mobile App
       

Kannada Duniya

ಪಿಸ್ತೂಲ್ ಹಿಡಿದು ಸೆಲ್ಫಿ ಕ್ಲಿಕ್ಕಿಸಲು ಹೋಗಿ ಪ್ರಾಣವೇ ಹೋಯ್ತು

ದೆಹಲಿಯಲ್ಲಿ ಪಿಸ್ತೂಲ್ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋಗಿ 23 ವರ್ಷದ ಯುವಕನ ಪ್ರಾಣವೇ ಹೋಗಿದೆ. ಶಿಕ್ಷಕನಾಗಿರೋ ಪ್ರಶಾಂತ್ ಚೌಹಾಣ್ ಎಂಬ ಯುವಕ ಸಂಬಂಧಿಕರನ್ನು ಭೇಟಿಯಾಗಲು ದೆಹಲಿಗೆ ಬಂದಿದ್ದ.

11ನೇ ತರಗತಿಯಲ್ಲಿ ಓದ್ತಾ ಇರೋ ಆತನ ಕಸಿನ್, ಅಪ್ಪನ ಪಿಸ್ತೂಲ್ ತೆಗೆದುಕೊಂಡು ಪ್ರಶಾಂತ್ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗಿದ್ದಾನೆ. ಇಬ್ಬರೂ ಕೋಣೆಯೊಂದರಲ್ಲಿ ಬಾಗಿಲು ಹಾಕಿಕೊಂಡು ಸೆಲ್ಫಿ ತೆಗೆದುಕೊಂಡಿದ್ದಾರೆ.

ಈ ವೇಳೆ ಬಾಲಕನ ಕೈಯಲ್ಲಿದ್ದ ಗನ್ ನಿಂದ ಆಕಸ್ಮಿಕವಾಗಿ ಗುಂಡು ಸಿಡಿದಿದೆ. ಅದು ಪ್ರಶಾಂತ್ ದೇಹ ಹೊಕ್ಕಿದ್ದು, ಆತ ಮೃತಪಟ್ಟಿದ್ದಾನೆ. ಮೃತ ಪ್ರಶಾಂತ್ ಚೌಹಾಣ್ ಉತ್ತರ ಪ್ರದೇಶ ಮೂಲದವನು.

ಆರೋಪಿ ಇನ್ನೂ ಅಪ್ರಾಪ್ತನಾಗಿದ್ದು, ಪೊಲೀಸರು ಅವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪಿಸ್ತೂಲ್ ಅನ್ನು ಸಹ ವಶಪಡಿಸಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...