alex Certify
ಕನ್ನಡ ದುನಿಯಾ       Mobile App
       

Kannada Duniya

ಹಿರಿಯ ನಾಗರಿಕರಿಗೆ ಖುಷಿ ಸುದ್ದಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಸವಾಗಿರುವ ಹಿರಿಯ ನಾಗರಿಕರಿಗೆ ಖುಷಿ ಸುದ್ದಿ. ಉಚಿತವಾಗಿ ತೀರ್ಥಯಾತ್ರೆಗೆ ಹೋಗಿ ಬರುವ ಅವಕಾಶ ಹಿರಿಯ ನಾಗರಿಕರಿಗೆ ಲಭಸಲಿದೆ. ಉತ್ತರ ಭಾರತ ಪ್ರವಾಸಕ್ಕೆ ತೆರಳುವ ಹಿರಿಯ ನಾಗರಿಕರ ಖರ್ಚನ್ನು ದೆಹಲಿ ಸರ್ಕಾರ ಭರಿಸಲಿದೆ. ಇದಕ್ಕಾಗಿ ಕೇಜ್ರಿವಾಲ್ ಸರ್ಕಾರ ಯೋಜನೆ ರೂಪಿಸುತ್ತಿದೆ.

ಭಾನುವಾರ ತಡರಾತ್ರಿ ಮುಖ್ಯಮಂತ್ರಿ ಕೇಜ್ರಿವಾಲ್ ನಿವಾಸದಲ್ಲಿ ಪ್ರವಾಸೋದ್ಯಮ ಇಲಾಖೆ ಹಾಗೂ ಯಾತ್ರಾ ಸಮಿತಿ ಸಭೆ ನಡೆದಿದೆ. ಸಭೆಯಲ್ಲಿ ಯಾತ್ರಾ ಸಮಿತಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಹೇಳಿದ್ದಾರೆ ಎನ್ನಲಾಗಿದೆ. ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಂದ ಹಿರಿಯ ನಾಗರಿಕರು ತೀರ್ಥಯಾತ್ರೆಗೆ ಹೋಗಲು ಸರ್ಕಾರ ಅವಕಾಶ ನೀಡಲಿದೆ.

ಪ್ರಸ್ತಾವನೆ ಅಡಿ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಿಂದ ತಲಾ 1000 ಹಿರಿಯ ನಾಗರಿಕರನ್ನು ಆಯ್ಕೆ ಮಾಡಲಾಗುವುದು. ಅವ್ರನ್ನು ಸರ್ಕಾರದ ವತಿಯಿಂದ ಉಚಿತವಾಗಿ ತೀರ್ಥಯಾತ್ರೆಗೆ ಕಳುಹಿಸಲಾಗುವುದು. ಪ್ರಯಾಣದ ಜೊತೆ ಹೊಟೇಲ್ ಖರ್ಚನ್ನು ಸರ್ಕಾರ ನೀಡಲಿದೆ.

ಹರಿದ್ವಾರ, ಋಷಿಕೇಶ್, ವೃಂದಾವನ, ಮಥುರಾ ಮತ್ತು ಕೇದಾರನಾಥ್-ಬದರಿನಾಥ್ ಧಾರ್ಮಿಕ ಸ್ಥಳಗಳನ್ನು ಸರ್ಕಾರ ಆಯ್ಕೆ ಮಾಡಿದೆ. ಬಸ್ ನಲ್ಲಿ ಯಾತ್ರಿಗಳನ್ನು ತೀರ್ಥಯಾತ್ರೆಗೆ ಕಳುಹಿಸಲಿದೆ. ಮಕರ ಸಂಕ್ರಾಂತಿ ನಂತ್ರ ಈ ಯೋಜನೆ ಕಾರ್ಯರೂಪಕ್ಕೆ ಬರಲಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...