alex Certify
ಕನ್ನಡ ದುನಿಯಾ       Mobile App
       

Kannada Duniya

ಅಪ್ರಾಪ್ತರಿಗೆ ಸಿಗರೇಟ್ ಮಾರುತ್ತಿದ್ದವ ಸಿಕ್ಕಿ ಬಿದ್ದಿದ್ಹೇಗೆ ?

ದೆಹಲಿಯ ಪಟೇಲ್ ನಗರದಲ್ಲಿ ಅಪ್ರಾಪ್ತರಿಗೆ ಸಿಗರೇಟ್ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಸಹೋದರರು ಅಂಗಡಿ ಮಾಲೀಕನ ಕೃತ್ಯವನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದರು.

ನಂತರ ಆ ವಿಡಿಯೋವನ್ನು ಪೊಲೀಸರಿಗೆ ಒಪ್ಪಿಸಿದ್ದರು. ವಿಡಿಯೋ ಆಧಾರದ ಮೇಲೆ ದೂರು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕಾನೂನಿನ ಪ್ರಕಾರ ಅಪ್ರಾಪ್ತರಿಗೆ ಸಿಗರೇಟ್ ಮಾರಾಟ ಮಾಡಿದವರಿಗೆ 1 ಲಕ್ಷ ದಂಡ ಹಾಗೂ ಜೈಲು ಶಿಕ್ಷೆ ವಿಧಿಸಬಹುದು.

ಶಾಲೆ ಬಳಿಯೇ ಇದ್ದ ಅಂಗಡಿಯಲ್ಲಿ ಅಪ್ರಾಪ್ತರಿಗೆ ಸಿಗರೇಟ್ ಮಾರಾಟ ಮಾಡುವುದನ್ನು ಗಮನಿಸಿದ್ದ ಪೋಷಕರೊಬ್ಬರು, ಅವರ ಮಕ್ಕಳ ಬಳಿ ವಿಡಿಯೋ ರೆಕಾರ್ಡ್ ಮಾಡುವಂತೆ ಹೇಳಿ ಕಳಿಸಿದ್ದರು. ನಂತರ ವಿಡಿಯೋ ತೆಗೆದುಕೊಂಡು ಹೋಗಿ ಪೊಲೀಸರಿಗೆ ನೀಡಿದ್ದಾರೆ.

ಸಹೋದರರಿಬ್ಬರು ಅಂಗಡಿಗೆ ತೆರಳಿ ಸಿಗರೇಟ್ ಕೊಡುವಂತೆ ಕೇಳಿದ್ದಾರೆ. ಸಿಗರೇಟ್ ಕೊಟ್ಟು ಅಂಗಡಿಯಾತ ಹಣ ಪಡೆಯುತ್ತಿರುವ ದೃಶ್ಯವನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...