alex Certify
ಕನ್ನಡ ದುನಿಯಾ       Mobile App
       

Kannada Duniya

ಹಾಡಹಗಲೇ ಉದ್ಯಮಿ ಮೇಲೆ ಗುಂಡಿನ ದಾಳಿ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ಹಾಡಹಗಲೇ ಉದ್ಯಮಿಯೋರ್ವರ ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು ಹಣ ದೋಚಿಕೊಂಡು ಪರಾರಿಯಾಗಿದ್ದಾರೆ.

ನವದೆಹಲಿಯ ಮಾಳವೀಯ ನಗರದಲ್ಲಿ ಈ ಘಟನೆ ನಡೆದಿದ್ದು, ಕಮಲ್ಜೀತ್ ಸೇಥಿ ಎಂಬ ಪೆಟ್ರೋಲ್ ಬಂಕ್ ಮಾಲೀಕರು, ಬ್ಯಾಂಕಿಗೆ ಹಣ ಡೆಪಾಸಿಟ್ ಮಾಡಲು ತೆರಳುತ್ತಿದ್ದ ವೇಳೆ ಆಗಮಿಸಿದ ದುಷ್ಕರ್ಮಿಗಳು ಗನ್ ನಿಂದ ಅವರ ಮೇಲೆ ಗುಂಡು ಹಾರಿಸಿ ಹಣ ಕಸಿದುಕೊಂಡಿದ್ದಾರೆ.

ಈ ಸಂದರ್ಭದಲ್ಲಿ ರಿಕ್ಷಾ ಚಾಲಕನೊಬ್ಬ ದುಷ್ಕರ್ಮಿಯನ್ನು ಹಿಡಿಯಲು ಯತ್ನಿಸಿದ್ದು, ರಿವಾಲ್ವರ್ ನಿಂದ ಆತನ ಮೇಲೆ ಹಲ್ಲೆ ಮಾಡಿ ಸಂಗಡಿಗರೊಂದಿಗೆ ಪರಾರಿಯಾಗಿದ್ದಾನೆ. ಕಮಲ್ಜೀತ್ ಸೇಥಿಯವರಿಂದ 15 ಲಕ್ಷ ರೂಪಾಯಿ ದೋಚಲಾಗಿದ್ದು, ತೀವ್ರವಾಗಿ ಗಾಯಗೊಂಡಿರುವ ಕಮಲ್ಜೀತ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿ ಟಿವಿಯಲ್ಲಿ ಸೆರೆಯಾಗಿರುವ ದೃಶ್ಯಗಳ ಆಧಾರದ ಮೇಲೆ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...