alex Certify
ಕನ್ನಡ ದುನಿಯಾ       Mobile App
       

Kannada Duniya

ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಅರೆಸ್ಟ್

rajendra-kumar-2

ನವದೆಹಲಿ: ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಸೇರಿದಂತೆ ಐವರನ್ನು ಸಿ.ಬಿ.ಐ.ಅಧಿಕಾರಿಗಳು ಬಂಧಿಸಿದ್ದಾರೆ. ಭ್ರಷ್ಟಾಚಾರ ಆರೋಪದಡಿ ಅವರನ್ನು ಬಂಧಿಸಲಾಗಿದೆ.

ರಾಜೇಂದ್ರ ಕುಮಾರ್, ಸಂದೀಪ್ ಕುಮಾರ್, ದಿನೇಶ್ ಗುಪ್ತಾ, ಅಶೋಕ್ ಕುಮಾರ್ ಹಾಗೂ ತರುಣ್ ಶರ್ಮ ಅವರನ್ನು ಬಂಧಿಸಲಾಗಿದೆ. ಇದರೊಂದಿಗೆ ಎಂಡೆವರ್ ಕಂಪನಿಯ ನಿರ್ದೇಶಕರನ್ನು ಬಂಧಿಸಲಾಗಿದೆ. ಟೆಂಡರ್ ಪ್ರಕ್ರಿಯೆ ನಡೆಸದೇ ಬೇನಾಮಿ ಕಂಪನಿಗಳಿಗೆ ಗುತ್ತಿಗೆ ನೀಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ. ರಾಜೇಂದ್ರ ಕುಮಾರ್ ಮತ್ತಿತರರನ್ನು ಬಂಧಿಸಿರುವುದಕ್ಕೆ ಆಪ್ ಸರ್ಕಾರ ವಿರೋಧ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಕೆಲವು ತಿಂಗಳ ಹಿಂದೆ ರಾಜೇಂದ್ರ ಕುಮಾರ್ ಕಚೇರಿ ಮೇಲೆ ಸಿ.ಬಿ.ಐ. ದಾಳಿ ನಡೆಸಿತ್ತು. ಅದಾದ ನಂತರ ಸಿ.ಬಿ.ಐ. ಅಧಿಕಾರಿಗಳು ರಾಜೇಂದ್ರ ಕುಮಾರ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದು, ಇಂದು ಅವರನ್ನು ಬಂಧಿಸಲಾಗಿದೆ. ಇದಕ್ಕೆ ಆಪ್ ತೀವ್ರ ವಿರೋಧ ವ್ಯಕ್ತಪಡಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...