alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಎಂ ಸಮ್ಮುಖದಲ್ಲೇ ಶಾಸಕರಿಂದ ಮುಖ್ಯ ಕಾರ್ಯದರ್ಶಿಗೆ ಥಳಿತ…?

ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿಯ ಆಮ್ ಆದ್ಮಿ ಸರ್ಕಾರ, ಈಗ ಮತ್ತೊಂದು ವಿವಾದದಲ್ಲಿ ಸಿಲುಕಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಅನ್ಶು ಪ್ರಕಾಶ್ ಅವರ ಮೇಲೆ ಇಬ್ಬರು ಆಪ್ ಶಾಸಕರು ಹಲ್ಲೆ ಮಾಡಿದ್ದಾರೆಂದು ಹೇಳಲಾಗಿದ್ದು, ಈಗ ಐಎಎಸ್ ಅಧಿಕಾರಿಗಳೆಲ್ಲರೂ ಪ್ರತಿಭಟನೆಗೆ ಸಜ್ಜಾಗಿದ್ದಾರೆ.

ಸೋಮವಾರ ರಾತ್ರಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮೀಟಿಂಗ್ ಸಂಬಂಧ ಅನ್ಶು ಪ್ರಕಾಶ್ ರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡಿದ್ದರು. ಈ ಸಂದರ್ಭದಲ್ಲಿ ಅಲ್ಲಿದ್ದ ಇಬ್ಬರು ಶಾಸಕರು ಅವರ ಮೇಲೆ ಹಲ್ಲೆ ನಡೆಸಿದ್ದಾರೆಂದು ಹೇಳಲಾಗಿದ್ದು, ಮುಖ್ಯ ಕಾರ್ಯದರ್ಶಿ, ಅರವಿಂದ್ ಕೇಜ್ರಿವಾಲ್ ಮನೆಯಿಂದ ಹೊರ ಬಂದ ಮೇಲೆ ಇದೀಗ ಇತರೆ ಐಎಎಸ್ ಅಧಿಕಾರಿಗಳು ಆರೋಪಿ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಲೆಫ್ಟಿನೆಂಟ್ ಗವರ್ನರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಹಲ್ಲೆ ಆರೋಪವನ್ನು ನಿರಾಕರಿಸಿರುವ ಆಮ್ ಆದ್ಮಿ ಪಕ್ಷದ ವಕ್ತಾರರು, ಮೀಟಿಂಗ್ ಸಂದರ್ಭದಲ್ಲಿ ಶಾಸಕರು ಕೇಳಿದ ಪ್ರಶ್ನೆಗೆ ಸಮರ್ಪಕ ಉತ್ತರ ನೀಡದೇ ತಾವು ಎಲ್ಲ ಮಾಹಿತಿಯನ್ನು ಲೆಫ್ಟಿನೆಂಟ್ ಗವರ್ನರ್ ಅವರಿಗೆ ನೀಡುವುದಾಗಿ ಮುಖ್ಯ ಕಾರ್ಯದರ್ಶಿ ಅನ್ಶು ಪ್ರಕಾಶ್ ತಿಳಿಸಿದರು. ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳಾದ ತಮಗೆ ಮಾಹಿತಿ ನೀಡಲಿಲ್ಲವೆಂದರೆ ಹೇಗೆ ಎಂದು ಶಾಸಕರು ಪ್ರಶ್ನಿಸಿದಾಗ ಮುಖ್ಯ ಕಾರ್ಯದರ್ಶಿ ಅರ್ಧಕ್ಕೆ ಸಭೆಯಿಂದ ನಿರ್ಗಮಿಸಿದ್ದಾರೆಂದು ತಿಳಿಸಿದ್ದಾರೆ.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...