alex Certify
ಕನ್ನಡ ದುನಿಯಾ       Mobile App
       

Kannada Duniya

ಕೋರ್ಟ್ ಕಟಕಟೆ ಏರಬೇಕಿದೆ ಕೇಜ್ರಿವಾಲ್

kejri

ಡಿಡಿಸಿಎ ವಿವಾದಕ್ಕೆ ಸಂಬಂಧಪಟ್ಟಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸಬೇಕಿದೆ. ಕೇಜ್ರಿವಾಲ್ ವಿರುದ್ಧ ವಿತ್ತ ಸಚಿವ ಅರುಣ್ ಜೇಟ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದು, ಮೇ 20ರಿಂದ ವಿಚಾರಣೆ ಆರಂಭವಾಗಲಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿ ಕೋರ್ಟ್ ನಲ್ಲಿಂದು ಗದ್ದಲ ನಡೀತು.

ವಿಚಾರಣೆಗೆ ಖುದ್ದು ಅರವಿಂದ್ ಕೇಜ್ರಿವಾಲ್ ಬಂದಿದ್ದರು, ಆದ್ರೆ ಅರುಣ್ ಜೇಟ್ಲಿ ಗೈರಾಗಿದ್ದರು. ಈ ಬಗ್ಗೆ ಕೇಜ್ರಿವಾಲ್ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ಉಭಯ ವಕೀಲರ ಮಧ್ಯೆ ವಾಗ್ವಾದ ನಡೀತು. ಬಳಿಕ ನ್ಯಾಯಾಧೀಶರು ಎಲ್ಲರನ್ನೂ ಕೋರ್ಟ್ ರೂಮಿನಿಂದ ಹೊರಕ್ಕೆ ಕಳಿಸಿದ್ರು.

ಕೇಜ್ರಿವಾಲ್ ಅವರನ್ನು ಹೊರತುಪಡಿಸಿ ಎಎಪಿಯ ಅಶುತೋಶ್, ಕುಮಾರ್ ವಿಶ್ವಾಸ್, ಸಂಜಯ್ ಸಿಂಗ್, ರಾಘವ್ ಚಡ್ಡಾ ಹಾಗೂ ದೀಪಕ್ ಬಾಜ್ಪೇಯಿ ಅವರ ಹೆಸರು ಕೂಡ ಈ ಪ್ರಕರಣದಲ್ಲಿದೆ. ದೆಹಲಿ ಕ್ರಿಕೆಟ್ ಮಂಡಳಿ ಅಧ್ಯಕ್ಷರಾಗಿದ್ದ ಅರುಣ್ ಜೇಟ್ಲಿ ವಿರುದ್ಧ ಕೇಜ್ರಿವಾಲ್ ಅಪಖ್ಯಾತಿ ಬರುವ ರೀತಿಯಲ್ಲಿ ಮಾತನಾಡಿದ್ದಾರೆಂಬ ಆರೋಪವಿದೆ. 10 ಕೋಟಿ ರೂಪಾಯಿ ಪರಿಹಾರ ಕೋರಿ ಜೇಟ್ಲಿ, ಕೇಜ್ರಿವಾಲ್ ವಿರುದ್ಧ ದೆಹಲಿ ಹೈಕೋರ್ಟ್ ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...