alex Certify
ಕನ್ನಡ ದುನಿಯಾ       Mobile App
       

Kannada Duniya

ಕೇಜ್ರಿವಾಲ್ ಕಾರಿನ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು

2016_2$largeimg29_Monday_2016_132749505

ಐದು ದಿನಗಳ ಪಂಜಾಬ್ ಪ್ರವಾಸದಲ್ಲಿರುವ ಆಮ್ ಆದ್ಮಿ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರ ಕಾರಿನ ಮೇಲೆ ದುಷ್ಕರ್ಮಿಗಳು ಕಬ್ಬಿಣದ ರಾಡ್‌‌‌, ಕಲ್ಲಿನಿಂದ ದಾಳಿ ಮಾಡಿರುವ ಘಟನೆ ನಡೆದಿದೆ.

ಮುಂದಿನ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಪಂಜಾಬ್ ಪ್ರವಾಸ ನಡೆಸುತ್ತಿರುವ ಕೇಜ್ರಿವಾಲ್ ಲೂಧಿಯಾನಾದಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದು, ಕಾರಿನ ಗ್ಲಾಸ್ ಪುಡಿ ಪುಡಿಯಾಗಿರುವುದಲ್ಲದೇ ಕಾರಿನ ಕೆಲ ಭಾಗಗಳು ಹಾನಿಯಾಗಿವೆ. ಆದರೆ ಅದೃಷ್ಟವಶಾತ್ ಕೇಜ್ರಿವಾಲ್ ಅವರಿಗೆ ಯಾವುದೇ ತೊಂದರೆಯಾಗಿಲ್ಲ.

ಈ ಕುರಿತು ಟ್ವೀಟ್‌ ಮಾಡಿರುವ ಕೇಜ್ರಿವಾಲ್, ಬಾದಲ್ ಬೆಂಬಲಿಗ ಗೂಂಡಾಗಳು ತಮ್ಮ ಮೇಲೆ ಹಲ್ಲೆಗೆ ಯತ್ನಿಸಿದ್ದು ಇದಕ್ಕೆ ತಾವು ಬಗ್ಗುವುದಿಲ್ಲ ಎಂದು ಕಿಡಿ ಕಾರಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...