alex Certify
ಕನ್ನಡ ದುನಿಯಾ       Mobile App
       

Kannada Duniya

ಎಸ್ಐ ಪುತ್ರ ಮಾಡಿದ ನಾಚಿಕೆಗೇಡಿ ಕೃತ್ಯ ನೋಡಿದ್ರೆ ಬೆಚ್ಚಿ ಬೀಳ್ತಿರಿ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಒಂದು ಈಗ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಕಾನೂನು-ಸುವ್ಯವಸ್ಥೆ ಕಾಪಾಡಬೇಕಾದ ಸಬ್ ಇನ್ಸ್ಪೆಕ್ಟರ್ ಒಬ್ಬರ ಪುತ್ರ, ಯುವತಿಯೊಬ್ಬಳನ್ನು ಮನಬಂದಂತೆ ಥಳಿಸಿದ್ದು, ಈಗ ಬಂಧನಕ್ಕೊಳಗಾಗಿದ್ದಾನೆ.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಈ ಘಟನೆ ನಡೆದಿದ್ದು, ಸಬ್ ಇನ್ಸ್ಪೆಕ್ಟರ್ ಒಬ್ಬರ ಪುತ್ರ ರೋಹಿತ್ ತೋಮಾರ್ ಎಂಬಾತ ತಿಲಕ್ ನಗರ್ ಏರಿಯಾದಲ್ಲಿ ಈ ಯುವತಿಯನ್ನು ಅಮಾನವೀಯವಾಗಿ ಥಳಿಸಿದ್ದಾನೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಗೃಹ ಸಚಿವ ರಾಜನಾಥ್ ಸಿಂಗ್ ಅವರ ಗಮನಕ್ಕೆ ಬಂದಿದ್ದು, ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಆರೋಪಿ ರೋಹಿತ್ ತೋಮಾರ್ ನನ್ನು ಈಗ ಬಂಧಿಸಲಾಗಿದೆ.

ಯಾವ ಕಾರಣಕ್ಕಾಗಿ ಈ ಕೃತ್ಯ ನಡೆದಿದೆ ಎಂಬುದು ತಿಳಿದು ಬಂದಿಲ್ಲವಾದರೂ ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...