alex Certify
ಕನ್ನಡ ದುನಿಯಾ       Mobile App
       

Kannada Duniya

ಅತ್ಯಾಚಾರದ ದೂರು ದಾಖಲಾದ ಬಳಿಕ ಗೊತ್ತಾಯ್ತು ಈ ಸತ್ಯ

ಸಾಮೂಹಿಕ ಅತ್ಯಾಚಾರದ ಬಗ್ಗೆ ದೂರು ನೀಡಲು ಹೋದ 16 ವರ್ಷದ ಬಾಲಕಿ, ಈಗಾಗಲೇ 5 ತಿಂಗಳ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಗ್ರೇಟರ್‌ ನೊಯ್ಡಾದಲ್ಲಿ ನಾಲ್ಕು ಮಂದಿ ಮನೆಯಲ್ಲಿ 6 ದಿನಗಳ ಕಾಲ ಕೂಡಿ ಹಾಕಿ ಅತ್ಯಾಚಾರ ನಡೆಸಿದ್ದಾರೆ ಎಂದು ಬಾಲಕಿ ದೂರು ನೀಡಿದ್ದಾಳೆ. ಈ ಸಂಬಂಧ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ವೇಳೆ, ಆಕೆ 5 ತಿಂಗಳ ಗರ್ಭಿಣಿ ಎಂಬ ವಿಚಾರ ಗೊತ್ತಾಗಿದೆ.

ಈಗ ಶಹನ್ವಾಜ್‌ ಹಾಗೂ ನದೀಮ್‌ ಎಂಬವರನ್ನು ಬಂಧಿಸಲಾಗಿದೆ. ಶಹನ್ವಾಜ್‌ ಬಾಲಕಿಯ ಮನೆಯ ಹತ್ತಿರದಲ್ಲಿ ಬಾಡಿಗೆ ಮನೆಯಲ್ಲಿದ್ದಾನೆ. ಬಾಲಕಿ ತನ್ನ ಪೋಷಕರೊಂದಿಗೆ ವಾಸವಾಗಿದ್ದಾಳೆ. ಅಗಾಗ್ಗೆ ಮನೆಗೆ ಬರುತ್ತಿದ್ದ ಶಹನ್ವಾಜ್‌ನಿಂದ ಕೆಲ ಸಮಯ ಹಿಂದೆಯೇ ಬಾಲಕಿ ಅತ್ಯಾಚಾರಕ್ಕೆ ಒಳಗಾಗಿರುವ ಸಾಧ್ಯತೆಗಳಿವೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಆ.15 ರಂದು ಶಹನ್ವಾಜ್‌ ಬಾಲಕಿಯನ್ನು ಅಪಹರಿಸಿ, ಮನೆಯೊಂದರಲ್ಲಿ ಕೂಡಿ ಹಾಕಿದ್ದಾನೆ. ಶಹನ್ವಾಜ್‌ನ ಸ್ನೇಹಿತ ನದೀಮ್‌ಗೆ ಸೇರಿದ ಮನೆಯಲ್ಲಿ ಇರಿಸಲಾಗಿದ್ದು, ಶಹನ್ವಾಜ್‌ , ನದೀಮ್‌ ಹಾಗೂ ಆತನ ಇಬ್ಬರು ಸ್ನೇಹಿತರು ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಬಾಲಕಿ ದೂರಿನಲ್ಲಿ ಹೇಳಿದ್ದಾಳೆ. ಆ.21 ರಂದು ಬಾಲಕಿ ಮನೆಯಿಂದ ತಪ್ಪಿಸಿಕೊಂಡಿದ್ದು, ಪೊಲೀಸರಿಗೆ ದೂರು ನೀಡಿದ್ದಾಳೆ. ವೈದ್ಯಕೀಯ ಪರೀಕ್ಷೆ ನಡೆಸುವ ವೇಳೆ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...