alex Certify
ಕನ್ನಡ ದುನಿಯಾ       Mobile App
       

Kannada Duniya

ಅರವಿಂದ್ ಕೇಜ್ರಿವಾಲ್ ಗೆ ಮುಖಭಂಗ

KEJRIWAL COURTದೆಹಲಿಯ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಹಿನ್ನಡೆಯಾಗಿದೆ.

ಲೆಫ್ಟಿನೆಂಟ್ ಗವರ್ನರ್, ದೆಹಲಿಯ ಆಡಳಿತಾತ್ಮಕ ಮುಖ್ಯಸ್ಥ ಎಂದು ಹೈಕೋರ್ಟ್ ತೀರ್ಪು ನೀಡಿದೆ. ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅಧಿಕಾರವನ್ನು ಪ್ರಶ್ನಿಸಿ ಆಪ್ ಸರ್ಕಾರ, ಅರ್ಜಿ ಸಲ್ಲಿಸಿತ್ತು. ಅರ್ಜಿ ವಜಾಗೊಳಿಸಿರುವ ಜಸ್ಟಿಸ್ ಜಿ.ರೋಹಿಣಿ ಮತ್ತು ಜಯಂತ್ ನಾಥ್, ಲೆಫ್ಟಿನೆಂಟ್ ಗವರ್ನರ್ ಅಧಿಕಾರಗಳನ್ನು ಸರ್ಕಾರ ಪ್ರಶ್ನಿಸುವಂತಿಲ್ಲ ಎಂದು ತೀರ್ಪು ನೀಡಿದೆ.

ಸಂಪುಟ ಸಲಹೆ ಮೇರೆಗೆ ಎಲ್ ಜಿ ಕಾರ್ಯ ನಿರ್ವಹಿಸಬೇಕು ಎಂಬ ಆಪ್ ಸರ್ಕಾರದ ವಾದ ಆಧಾರ ರಹಿತ, ಅದನ್ನು ಒಪ್ಪಿಕೊಳ್ಳುವುದು ಅಸಾಧ್ಯ ಎಂದು ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ. ದೆಹಲಿಯ ಕಾನೂನು, ಸುವ್ಯವಸ್ಥೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿರ್ಧಾರವೇ ಅಂತಿಮ ಎಂದು ಸ್ಪಷ್ಟಪಡಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅರವಿಂದ್ ಕೇಜ್ರಿವಾಲ್, ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರುವುದಾಗಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...