alex Certify
ಕನ್ನಡ ದುನಿಯಾ       Mobile App
       

Kannada Duniya

ಪಾಕ್ ರಾಯಭಾರ ಕಛೇರಿ ಸಿಬ್ಬಂದಿ ವಶಕ್ಕೆ

abdul-basitಭಾರತದಲ್ಲಿನ ಪಾಕಿಸ್ತಾನದ ರಾಯಭಾರಿ ಅಬ್ದುಲ್ ಬಸಿತ್ ಅವರ ಕಛೇರಿಯ ಸಿಬ್ಬಂದಿಯೊಬ್ಬನನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಈತನ ಬಳಿ ರಕ್ಷಣಾ ಇಲಾಖೆಗೆ ಸಂಬಂಧಪಟ್ಟ ದಾಖಲೆಗಳಿದ್ದವೆಂದು ಹೇಳಲಾಗಿದೆ.

ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸುತ್ತಿದ್ದಾರೆಂಬ ಅನುಮಾನದ ಮೇರೆಗೆ ಇಬ್ಬರು ವ್ಯಕ್ತಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದು, ವಿಚಾರಣೆ ಸಂದರ್ಭದಲ್ಲಿ ಪಾಕ್ ರಾಯಭಾರ ಕಛೇರಿಯ ಸಿಬ್ಬಂದಿ ಮೆಹಮೂದ್ ಅಖ್ತರ್ ಜೊತೆ ಸಂಪರ್ಕವಿಟ್ಟುಕೊಂಡಿರುವ ಕುರಿತು ಬಾಯ್ಬಿಟ್ಟಿದ್ದಾರೆ.

ತಕ್ಷಣ ಮೆಹಮೂದ್ ಅಖ್ತರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಆತನ ಬಳಿ ಭಾರತದ ರಕ್ಷಣಾ ಇಲಾಖೆಗೆ ಸಂಬಂಧಪಟ್ಟ ಮಹತ್ವದ ದಾಖಲೆಗಳು ಇದ್ದವೆಂದು ಹೇಳಲಾಗಿದೆ. ಆತ, ರಾಜತಾಂತ್ರಿಕ ಪಾಸ್ ಪೋರ್ಟ್ ಹೊಂದಿದ್ದ ಕಾರಣ ಬಿಟ್ಟು ಕಳುಹಿಸಲಾಗಿದ್ದು, ವಿದೇಶಾಂಗ ಸಚಿವಾಲಯ, ಈ ಕುರಿತು ವಿವರಣೆ ನೀಡುವಂತೆ ಪಾಕ್ ರಾಯಭಾರಿ ಅಬ್ದುಲ್ ಬಸಿತ್ ಅವರಿಗೆ ಸೂಚನೆ ನೀಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...