alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಗೋಪಾಲ್ ರಾಯ್

rai resignದೆಹಲಿಯ ಆಮ್ ಆದ್ಮಿ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದ ಗೋಪಾಲ್ ರಾಯ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಲ ದಿನಗಳ ಹಿಂದೆ ಶಸ್ತ್ರ ಚಿಕಿತ್ಸೆಗೊಳಗಾಗಿದ್ದ ಅವರು, ಆರೋಗ್ಯದ ಕಾರಣ ನೀಡಿ ರಾಜೀನಾಮೆ ನೀಡಿದ್ದು, ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರಿಗೆ ಸಾರಿಗೆ ಖಾತೆಯ ಹೆಚ್ಚುವರಿ ಹೊಣೆ ವಹಿಸಲಾಗಿದೆ.

ಶುಕ್ರವಾರದಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಿದ್ದ ಗೋಪಾಲ್ ರಾಯ್, ಆರೋಗ್ಯ ಸಮಸ್ಯೆಯಿರುವ ಕಾರಣ ತಮಗೆ ಖಾತೆಯ ಹೊಣೆಯನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಈ ಹೊಣೆಗಾರಿಕೆಯಿಂದ ಮುಕ್ತಗೊಳಿಸಿ ಎಂದು ಮನವಿ ಮಾಡಿದ್ದರು.

ಆದರೆ ಪ್ರೀಮಿಯಂ ಬಸ್ ಸರ್ವೀಸ್ ಸ್ಕೀಂ ನಲ್ಲಿ ದೆಹಲಿ ಸರ್ಕಾರ ಕೆಲವರಿಗೆ ಅನುಕೂಲ ಮಾಡಿಕೊಟ್ಟಿದೆ ಎಂದು ಆರೋಪಿಸಿ ಬಿಜೆಪಿ ಶಾಸಕ ವಿಜೇಂದರ್ ಗುಪ್ತಾ, ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು. ಈ ಹಗರಣದಲ್ಲಿ ಗೋಪಾಲ್ ರಾಯ್ ಅವರ ಪಾತ್ರವಿದೆಯೆಂಬ ಮಾತುಗಳು ಕೇಳಿ ಬರುತ್ತಿರುವ ಮಧ್ಯೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...