alex Certify
ಕನ್ನಡ ದುನಿಯಾ       Mobile App
       

Kannada Duniya

ಕುಡಿದ ಮತ್ತಲ್ಲಿ ಮಾಡಬಾರದ ಕೆಲಸ ಮಾಡಿದ ಯುವತಿ

ಒಳಗೆ ಸೇರಿದರೆ ಗುಂಡು ಹುಡುಗಿ ಆಗುವಳು ಗಂಡು ಅನ್ನೋ ಹಾಡು ಯಾರಿಗೆ ಗೊತ್ತಿಲ್ಲ ಹೇಳಿ. ಈ ಹಾಡಿನ ಪ್ರತಿ ಪದದ ಅರ್ಥವನ್ನು ನಿಜವಾಗಿಸಿದ್ದಾಳೆ ದೆಹಲಿಯ ಯುವತಿ. ಅತಿಯಾದ ಆಲ್ಕೋಹಾಲ್ ಸೇವಿಸಿ ಅನವಶ್ಯಕವಾಗಿ ಮತ್ತೊಬ್ಬ ಮಹಿಳೆಗೆ ಕಿರುಕುಳ ನೀಡಿದ ಆರೋಪದ ಅಡಿಯಲ್ಲಿ ಪೊಲೀಸರು ಯುವತಿಯೊಬ್ಬಳನ್ನು ಬಂಧಿಸಿದ್ದಾರೆ.

ಕುಡಿದು ಚಿತ್ತಾಗಿ ಕಾರು ಚಾಲನೆ ಮಾಡುತ್ತಿದ್ದ ಯುವತಿಯೊಬ್ಬಳು ಮಗುವಿನೊಂದಿಗೆ ಫುಟ್ ಪಾತ್ ನಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರನ್ನ ಹಿಡಿದು ಥಳಿಸಿದ್ದಾಳೆ. ಆಕೆಯ ಹಸುಗೂಸಿನ ಮೇಲೂ ಹಲ್ಲೆ ನಡೆಸಿದ್ದಾಳೆ. ಅಲ್ಲದೇ ಅವರನ್ನ ಎಲ್ಲರ ಎದುರೇ ಅಸಭ್ಯವಾಗಿ ಮುಟ್ಟಿದ ಪ್ರಕರಣ ದೆಹಲಿಯ ಜಗತ್ ಪುರಿಯಲ್ಲಿ ನಡೆದಿದೆ. ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಆಕೆಯನ್ನ ವಶಕ್ಕೆ ಪಡೆದಿದ್ದಾರೆ.

ಬಂಧಿತ ಯುವತಿಯ ಮೇಲೆ ಐಪಿಸಿ ಸೆಕ್ಷನ್ 323, 354, 509, 279 ರ ಅಡಿಯಲ್ಲಿ ಪ್ರಕರಣವನ್ನು ದಾಖಲು ಮಾಡಲಾಗಿದೆ. ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ ಕುಡಿತದ ನಶೆಯಲ್ಲಿ ಯುವತಿ ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿದ್ದು, ಸ್ವಲ್ಪ ಹೆಚ್ಚು ಕಡಿಮೆಯಾಗಿದ್ದರು ಅಪಘಾತ ಸಂಭವಿಸುವ ಸಾಧ್ಯತೆ ಇತ್ತಂತೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...