alex Certify
ಕನ್ನಡ ದುನಿಯಾ       Mobile App
       

Kannada Duniya

ಲ್ಯಾಪ್ ಟಾಪ್ ನಲ್ಲಿ ಇ ಮೇಲ್ ಚೆಕ್ ಮಾಡುತ್ತಿರುವಾಗಲೇ ಸಾವನ್ನಪ್ಪಿದ ಯುವಕ

laptop workಕೇವಲ ಮೂರು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ 23 ವರ್ಷದ ವ್ಯಕ್ತಿಯೊಬ್ಬ ತನ್ನ ಲ್ಯಾಪ್ ಟಾಪ್ ನಲ್ಲಿ ಇ ಮೇಲ್ ಚೆಕ್ ಮಾಡುತ್ತಿರುವಾಗಲೇ ಕರೆಂಟ್ ಶಾಕ್ ತಗುಲಿ ಸಾವನ್ನಪ್ಪಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ.

ನವದೆಹಲಿಯ ಗೋವಿಂದಪುರಿ ನಿವಾಸಿ ಬ್ರಿಜೇಶ್ ಸಿಂಗ್ ಸಾವನ್ನಪ್ಪಿದವರಾಗಿದ್ದು, ಖಾಸಗಿ ಕಂಪನಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಈತ, ಭಾನುವಾರ ಮಧ್ಯಾಹ್ನ ಚಾರ್ಜರ್ ಹಾಕಿಕೊಂಡೇ ಇ ಮೇಲ್ ಚೆಕ್ ಮಾಡುವ ವೇಳೆ ಈ ದುರ್ಘಟನೆ ಸಂಭವಿಸಿದೆ.

ಕುಸಿದು ಬಿದ್ದಿದ್ದ ಬ್ರಿಜೇಶ್ ಸಿಂಗ್ ರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದಾರೆ. ಅರ್ಥಿಂಗ್ ಸರಿಯಾಗಿ ಮಾಡದ ಸಂದರ್ಭದಲ್ಲಿ ಕರೆಂಟ್ ಪ್ರವಹಿಸುವ ಸಾಧ್ಯತೆ ಇದೆ ಎನ್ನಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬ್ರಿಜೇಶ್ ಸಿಂಗ್ ದೇಹವನ್ನು ಮರಣೋತ್ತರ ಪರೀಕ್ಷೆಗೊಳಪಡಿಸಿದ್ದಾರೆ. ಅಲ್ಲದೇ ಲ್ಯಾಪ್ ಟಾಪ್ ನಲ್ಲಿ ಏನಾದರೂ ದೋಷವಿರಬಹುದೇ ಎಂಬುದನ್ನು ಪರಿಶೀಲಿಸಲು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಅದನ್ನು ಕಳುಹಿಸಿಕೊಟ್ಟಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...