alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಕಿ ದುರಂತದಲ್ಲಿ ಅಮೂಲ್ಯ ವಸ್ತುಗಳು ಭಸ್ಮ

natural-history-museum-fir

ನವದೆಹಲಿಯ ರಾಷ್ಟ್ರೀಯ ಇತಿಹಾಸ ವಸ್ತು ಸಂಗ್ರಹಾಲಯದ ಕಟ್ಟಡಕ್ಕೆ ಬೆಂಕಿ ತಗುಲಿದ್ದು, ಭಾರೀ ಪ್ರಮಾಣದ ಆಸ್ತಿ, ಪಾಸ್ತಿಗೆ ನಷ್ಟ ಉಂಟಾಗಿದೆ. ಅವಘಡದಲ್ಲಿ ಅಮೂಲ್ಯ ವಸ್ತುಗಳು ಕೂಡ ಹಾನಿಗೆ ಒಳಗಾಗಿವೆ.

ನವದೆಹಲಿಯ ಪ್ರಮುಖ ಪ್ರದೇಶವಾಗಿರುವ ಮಂಡಿ ಹೌಸ್ ಎಫ್ಐಸಿಸಿಐ ಕಟ್ಟಡದ ಆಡಿಟೋರಿಯಂ ಕಟ್ಟಡದಲ್ಲಿನ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದು, 40ಕ್ಕೂ ಅಧಿಕ ಅಗ್ನಿಶಾಮಕ ವಾಹನಗಳು ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿವೆ. ಈ ಸಂದರ್ಭದಲ್ಲಿ ನಾಲ್ವರು ಅಗ್ನಿಶಾಮಕ ಸಿಬ್ಬಂದಿಗೆ ಸುಟ್ಟ ಗಾಯಗಳಾಗಿವೆ.

ಗಾಯಾಳುಗಳನ್ನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಸೇರಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂದು ಹೇಳಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...