alex Certify
ಕನ್ನಡ ದುನಿಯಾ       Mobile App
       

Kannada Duniya

“ನೋಟು ನಿಷೇಧ”ದ ಹಿಂದಿನ ಕಾರಣವನ್ನು ಕೊನೆಗೂ ಬಿಚ್ಚಿಟ್ಟ ಪ್ರಧಾನಿ ಮೋದಿ

ಕಪ್ಪು ಹಣವನ್ನು ತಡೆಗಟ್ಟುವ ಸಲುವಾಗಿ ಕೇಂದ್ರ ಸರ್ಕಾರ, 1000 ಹಾಗೂ 500 ರೂ. ಗಳ ಚಲಾವಣೆಯನ್ನು ರದ್ದುಗೊಳಿಸಿ ಈಗ ಎರಡು ವರ್ಷಗಳಾಗಿದೆ. ಈಗಲೂ ಕೇಂದ್ರ ಸರ್ಕಾರದ ಈ ತೀರ್ಮಾನದ ಕುರಿತು ಪರ-ವಿರೋಧದ ಚರ್ಚೆಗಳು ನಡೆದಿವೆ.

ಇದರ ಮಧ್ಯೆ, ಮಧ್ಯಪ್ರದೇಶದ ಝಾಬುವಾದಲ್ಲಿ ನಡೆದ ವಿಧಾನಸಭಾ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, “ನೋಟು ನಿಷೇಧ” ನಿರ್ಧಾರ ಕೈಗೊಂಡ ಹಿಂದಿನ ಕಾರಣವನ್ನು ಬಿಚ್ಚಿಟ್ಟಿದ್ದಾರೆ.

ಭ್ರಷ್ಟಾಚಾರದ ಚಿಕಿತ್ಸೆಗೆ ನೋಟು ನಿಷೇಧ ಉತ್ತಮ ಔಷಧಿಯಾಗಿತ್ತು ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ಬ್ಯಾಂಕಿಂಗ್ ವ್ಯವಸ್ಥೆಗೆ ಹಣವನ್ನು ಮರಳಿ ತರಲು ಹಾಗೂ ದೇಶದಲ್ಲಿ ಆಳವಾಗಿ ಬೇರೂರಿದ್ದ ಭ್ರಷ್ಟಾಚಾರವನ್ನು ತಡೆಗಟ್ಟಲು ಇಂತಹ ಒಂದು ನಿರ್ಧಾರ ಬಹು ಮುಖ್ಯವಾಗಿತ್ತು ಎಂದು ಸಮರ್ಥಿಸಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...