alex Certify
ಕನ್ನಡ ದುನಿಯಾ       Mobile App
       

Kannada Duniya

ಒಂದೇ ದಿನ 50 ಕ್ಕೂ ಅಧಿಕ ಪಕ್ಷಿಗಳ ಸಾವು

ಬಿಹಾರದ ಪೂರ್ವ ಚಂಪಾರಣ್ಯ ಜಿಲ್ಲೆಯ ಡುಮರಿಯಾಘಾಟ್ ನ ಸರೋವರ ಪ್ರದೇಶದಲ್ಲಿ ನಾಲ್ಕು ಡಜನ್ ಗೂ ಹೆಚ್ಚು ವಲಸೆ ಬಂದ ಸೈಬೀರಿಯನ್ ಪಕ್ಷಿಗಳು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿವೆ. ಈ ಬಗ್ಗೆ ಡುಮರಿಯಾಘಾಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸ್ ಪ್ರಕಾರ, ನೂರಾರು ಎಕರೆ ಪ್ರದೇಶದಲ್ಲಿರುವ ಈ ಸರೋವರದಲ್ಲಿ 50ಕ್ಕೂ ಹೆಚ್ಚು ಪಕ್ಷಿಗಳು ಸಾವನ್ನಪ್ಪಿವೆಯಂತೆ. ಸರೋವರಕ್ಕೆ ವಿಷ ಪದಾರ್ಥವನ್ನು ಹಾಕಿದ್ದು, ಇದೇ ಸಾವಿಗೆ ಕಾರಣವಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಒಂದೇ ದಿನ 50ಕ್ಕೂ ಹೆಚ್ಚು ಪಕ್ಷಿಗಳು ಸಾವನ್ನಪ್ಪಿರುವುದು ಈ ಅನುಮಾನಕ್ಕೆ ಕಾರಣವಾಗಿದೆ.

ಸ್ಥಳೀಯ ನಿವಾಸಿಯೊಬ್ಬ ಈ ಬಗ್ಗೆ ಪ್ರಕರಣ ದಾಖಲಿಸಿದ್ದಾನೆ. ಮೂವರ ವಿರುದ್ಧ ಆತ ದೂರು ನೀಡಿದ್ದಾನೆ. ಸೂಕ್ತ ವಿಚಾರಣೆ ನಂತ್ರ ಮುಂದಿನ ಕ್ರಮಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...