alex Certify
ಕನ್ನಡ ದುನಿಯಾ       Mobile App
       

Kannada Duniya

ನಡು ರಸ್ತೆಯಲ್ಲೇ ಮಾಡೆಲ್ ಸ್ಕರ್ಟ್ ಎಳೆದ ಕಿಡಿಗೇಡಿಗಳು

ಮಧ್ಯಪ್ರದೇಶದ ಇಂದೋರ್ ನಲ್ಲಿ ಜನನಿಬಿಡ ಸ್ಥಳದಲ್ಲೇ ಮಾಡೆಲ್ ಸ್ಕರ್ಟ್ ಎಳೆದು ಕಿರುಕುಳ ನೀಡಿದ ಘಟನೆ ನಡೆದಿದೆ.

ಮಾಡೆಲ್ ದ್ವಿಚಕ್ರ ವಾಹನದಲ್ಲಿ ಜನನಿಬಿಡ ಸ್ಥಳದಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಇಬ್ಬರು ದುಷ್ಕರ್ಮಿಗಳು ಸಮೀಪಕ್ಕೆ ಬಂದಿದ್ದಾರೆ. ಮಾಡೆಲ್ ಸ್ಕರ್ಟ್ ಎಳೆದು ಅಸಭ್ಯವಾಗಿ ವರ್ತಿಸಿದ್ದಾರೆ. ಸ್ಕರ್ಟ್ ಕೆಳಗೆ ಏನಿದೆ ಎಂದು ಪ್ರಶ್ನಿಸಿ ಕಿರುಕುಳ ನೀಡಿದ್ದು, ಅವರಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಮಾಡೆಲ್ ವಾಹನ ಸಮೇತ ಕೆಳಗೆ ಬಿದ್ದಿದ್ದಾರೆ.

ಅವರಿಗೆ ಗಾಯಗಳಾಗಿದ್ದು, ತಮಗಾದ ಕಹಿ ಅನುಭವವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸ್ಥಳದಲ್ಲಿ ಹೆಚ್ಚಿನ ಜನರಿದ್ದರೂ ಯಾರೂ ತಮ್ಮ ನೆರವಿಗೆ ಬರಲಿಲ್ಲ. ಹಿರಿಯರೊಬ್ಬರು ನಿನ್ನ ಸ್ಕರ್ಟ್ ನಿಂದಲೇ ಇದೆಲ್ಲಾ ಆಗಿದ್ದು ಎಂದು ನಿಂದಿಸಿದ್ದಾರೆ ಎಂದು ಮಾಡೆಲ್ ಹೇಳಿಕೊಂಡಿದ್ದಾರೆ.

ಅಂದ ಹಾಗೆ ಈ ಘಟನೆ ಸಿ.ಎಂ. ಶಿವರಾಜ್ ಸಿಂಗ್ ಚೌಹಾಣ್ ಗಮನಕ್ಕೆ ಬಂದಿದ್ದು, ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು ಕ್ರಮ ಕೈಗೊಳ್ಳಲು ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...