alex Certify
ಕನ್ನಡ ದುನಿಯಾ       Mobile App
       

Kannada Duniya

ವಿಸ್ತಾರಕ್ ಘರ್ಷಣೆಯಲ್ಲಿ BJP ಕಾರ್ಯಕರ್ತ ಸಾವು

tmc-bjpd-web

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಚೊಪ್ರಾ ಜಿಲ್ಲೆಯ ಉತ್ತರ ದೀನಜ್ ಪುರ ಚಟ್ರಾಘಾಟ್ ನಲ್ಲಿ ಬಿ.ಜೆ.ಪಿ. ಮತ್ತು ಟಿ.ಎಂ.ಸಿ. ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ.

ಘರ್ಷಣೆಯಲ್ಲಿ ಬಿ.ಜೆ.ಪಿ. ಕಾರ್ಯಕರ್ತನೊಬ್ಬ ಮೃತಪಟ್ಟಿದ್ದಾರೆ. ಬಿ.ಜೆ.ಪಿ.ಯಿಂದ ವಿಸ್ತಾರಕ್ ಯಾತ್ರೆಯನ್ನು ಕೈಗೊಳ್ಳಲಾಗಿದ್ದು, ಈ ಸಂದರ್ಭದಲ್ಲಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಘರ್ಷಣೆ ನಡೆದಿದೆ.

ವಿಸ್ತಾರಕ್ ಯಾತ್ರೆ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಘರ್ಷಣೆಯಲ್ಲಿ ಬಿ.ಜೆ.ಪಿ. ಕಾರ್ಯಕರ್ತನ ಮೇಲೆ ಗುಂಡು ಹಾರಿಸಿದ್ದು, ಆತ ಸಾವನ್ನಪ್ಪಿದ್ದಾನೆ.

ನಾಲ್ವರು ಗಾಯಗೊಂಡಿದ್ದು, ಉತ್ತರ ಬಂಗಾಳ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಸೇರಿಸಲಾಗಿದೆ. ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...