alex Certify
ಕನ್ನಡ ದುನಿಯಾ       Mobile App
       

Kannada Duniya

ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್…?

ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದ ಬಳಿಕ ಕಾಂಗ್ರೆಸ್ ನಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸಕರು ಎಂ.ಬಿ. ಪಾಟೀಲ್ ನೇತೃತ್ವದಲ್ಲಿ ಸರಣಿ ಸಭೆ ನಡೆಸಿದ್ದು, ಈ ಹಿನ್ನಲೆಯಲ್ಲಿ ಎಂ.ಬಿ. ಪಾಟೀಲರನ್ನು ಪಕ್ಷದ ಹೈಕಮಾಂಡ್ ದೆಹಲಿಗೆ ಕರೆಸಿಕೊಂಡಿತ್ತು. ದಿನೇಶ್ ಗುಂಡೂರಾವ್ ಸಹ ದೆಹಲಿಗೆ ತೆರಳಿದ್ದು, ಈ ಸಂದರ್ಭದಲ್ಲಿ ಕೆಲ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಕರ್ನಾಟಕದ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳು ತಿಳಿಸಿವೆ. ಈ ವಿಚಾರವನ್ನು ಶೀಘ್ರದಲ್ಲೇ ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಇದೆ. ಇಂದು ದೆಹಲಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಸಚಿವ ಸ್ಥಾನ ವಂಚಿತರಾಗಿ ಅಸಮಾಧಾನಗೊಂಡಿರುವ ಎಂ.ಬಿ. ಪಾಟೀಲ್ ಅವರಿಗೆ ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಕೊಡಲು ನಿರ್ಧರಿಸಲಾಗಿದೆ ಎನ್ನಲಾಗಿದ್ದು, ಇದಕ್ಕೆ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡದ ಎಂ.ಬಿ. ಪಾಟೀಲ್, ತಮ್ಮ ನಿರ್ಧಾರವನ್ನು ಬಳಿಕ ತಿಳಿಸುವುದಾಗಿ ಹೇಳಿದ್ದಾರೆನ್ನಲಾಗಿದೆ. ಸಭೆಯಿಂದ ಹೊರ ಬಂದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಂ.ಬಿ. ಪಾಟೀಲ್, ತಾವು ಒಬ್ಬಂಟಿಯಲ್ಲ. ತಮ್ಮ ಜೊತೆಗೆ 20 ಕ್ಕೂ ಅಧಿಕ ಶಾಸಕರಿರುವುದಾಗಿ ಹೇಳಿರುವುದು ಕುತೂಹಲಕ್ಕೆ ಕಾರಣವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...