alex Certify
ಕನ್ನಡ ದುನಿಯಾ       Mobile App
       

Kannada Duniya

ಅತ್ಯಾಚಾರಕ್ಕೊಳಗಾಗಿದ್ದ ದಲಿತ ಬಾಲಕಿಗೆ ಚಿಕಿತ್ಸೆ ನೀಡಲೊಪ್ಪದ ವೈದ್ಯ

actressrape480

ವೈದ್ಯರು ದೇವರಿಗೆ ಸಮಾನ ಅಂತಾರೆ. ಆದರೆ ಇಲ್ಲೊಬ್ಬ ವೈದ್ಯ ಕಾಮುಕರಿಂದ ಅತ್ಯಾಚಾರಕ್ಕೊಳಗಾದ ದಲಿತ ಬಾಲಕಿಯೊಬ್ಬಳಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಮೂಲಕ ವೈದ್ಯ ವೃತ್ತಿಗೇ ಕಪ್ಪು ಚುಕ್ಕಿಯಾಗಿದ್ದಾನೆ.

ಹೌದು. ಉತ್ತರಪ್ರದೇಶದ ಇಟವಾದಲ್ಲಿ ಈ ಘಟನೆ ನಡೆದಿದ್ದು, ಒಂಬತ್ತು ವರ್ಷ ವಯಸ್ಸಿನ ದಲಿತ ಬಾಲಕಿಯೊಬ್ಬಳ ಮೇಲೆ ಕಾಮುಕರು ಅಟ್ಟಹಾಸ ನಡೆಸಿ ಪರಾರಿಯಾಗಿದ್ದರು. ಈ ಸಮಯದಲ್ಲಿ ಬಾಲಕಿಯ ಗುಪ್ತಾಂಗದಿಂದ ರಕ್ತಸ್ರಾವವಾಗುತ್ತಿತ್ತು ಎನ್ನಲಾಗಿದ್ದು, ತಕ್ಷಣ ಪೋಷಕರು ಬಾಲಕಿಯನ್ನು ಸರ್ಕಾರಿ ಆಸ್ಪತ್ರೆಗೆ ಕರೆ ತಂದಿದ್ದಾರೆ.

ಆದರೆ ಬಾಲಕಿಯ ಸ್ಥಿತಿಯನ್ನು ನೋಡಿಯೂ ಸಹ ಅಲ್ಲಿನ ವೈದ್ಯರು ಚಿಕಿತ್ಸೆ ನೀಡಲು ನಿರಾಕರಿಸಿದ್ದು, ತಕ್ಷಣ ಪಕ್ಕದಲ್ಲಿಯೇ ಇದ್ದ ವೈದ್ಯಕೀಯ ಕಾಲೇಜಿಗೆ ಕರೆದೊಯ್ದು ಬಾಲಕಿಗೆ ಚಿಕಿತ್ಸೆ ಕೊಡಿಸಲಾಗಿದೆ ಎನ್ನಲಾಗಿದೆ.

ಈ ನಡುವೆ ವೈದ್ಯರು, ಬಾಲಕಿಯ ಸ್ಥಿತಿ ಚಿಂತಾಜನಕವಾಗಿದ್ದ ಕಾರಣ ನಾವು ಚಿಕಿತ್ಸೆ ನೀಡಲು ಹಿಂದೇಟು ಹಾಕಿದ್ದು ಆಸ್ಪತ್ರೆಯಲ್ಲಿ ಗ್ಲುಕೋಸ್ ಬಾಟಲಿ, ಎಕ್ಸ್-ರೇ ಇರಲಿಲ್ಲ ಎಂದು ಅಸಹಾಯಕತೆ ಪ್ರದರ್ಶಿಸಿದ್ದಾರೆ. ಘಟನೆಯ ಕುರಿತಂತೆ ಈಗಾಗಲೇ ಆಕ್ರೋಶ ಭುಗಿಲೆದ್ದಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಧಿಕಾರಿ ಚಂದ್ರಪಾಲ್‌ ಸಿಂಹ ತನಿಖೆ ನಡೆಸುವಂತೆ ಆದೇಶ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...