alex Certify
ಕನ್ನಡ ದುನಿಯಾ       Mobile App
       

Kannada Duniya

ನಾಚಿಕೆಗೇಡು….ಶಸ್ತ್ರಚಿಕಿತ್ಸೆ ವೇಳೆ ಲೈಂಗಿಕ ಶೋಷಣೆ ನಡೆಸಿದ ವೈದ್ಯ

ರಾಷ್ಟ್ರೀಯ ರಾಜಧಾನಿ ದೆಹಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಶಸ್ತ್ರ ಚಿಕಿತ್ಸೆ ವೇಳೆ ವೈದ್ಯನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆಂಬ ಆರೋಪ ಕೇಳಿ ಬಂದಿದೆ. ಆಪರೇಷನ್ ಥಿಯೇಟರ್ ನಲ್ಲಿ ಈ ಘಟನೆ ನಡೆದಿದೆ ಎಂದು ಮಹಿಳೆ ದೂರಿದ್ದಾಳೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಶುರು ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಮಹಿಳೆ ಅಳ್ತಾ ತನ್ನ ನೋವು ತೋಡಿಕೊಂಡಿದ್ದಾಳೆ. ವರದಿ ಪ್ರಕಾರ ದೆಹಲಿಯ ಗೋವಿಂದ ಬಲ್ಲಬ್ ಪಂತ್ ಸರ್ಕಾರಿ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ.

45 ವರ್ಷದ ಮಹಿಳೆ ಮೇಲೆ ಶೋಷಣೆ ನಡೆದಿದೆ. ಶಸ್ತ್ರಚಿಕಿತ್ಸೆ ವೇಳೆ ವೈದ್ಯರು ಲೈಂಗಿಕ ಕಿರುಕುಳ ನೀಡಿದ್ದರಂತೆ. ಪ್ರಜ್ಞೆ ಬಂದ ಮೇಲೆ ಮಹಿಳೆಗೆ ಈ ಸಂಗತಿ ಗೊತ್ತಾಗಿದೆ. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆಗೆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸೆಪ್ಟೆಂಬರ್ 12 ರಂದು ಶಸ್ತ್ರಚಿಕಿತ್ಸೆ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...