alex Certify
ಕನ್ನಡ ದುನಿಯಾ       Mobile App
       

Kannada Duniya

ಕಳ್ಳನಿಂದ ಮನೆಯೊಡತಿಯನ್ನು ರಕ್ಷಿಸಿದ ಶ್ವಾನ

dog689e33ಕೊರಿಯರ್ ತಲುಪಿಸುವ ನೆಪದಲ್ಲಿ ಮನೆಯೊಂದಕ್ಕೆ ನುಗ್ಗಿದ ಯುವಕನೊಬ್ಬ ಮನೆಯಲ್ಲಿದ್ದ 51 ವರ್ಷದ ಮಹಿಳೆ ಮೇಲೆ ಹಲ್ಲೆ ನಡೆಸಿ ಕಳ್ಳತನಕ್ಕೆ ಯತ್ನಿಸಿದ್ದು, ಆದರೆ ಮನೆಯಲ್ಲಿದ್ದ ನಾಯಿ ಆತನ ಪ್ರಯತ್ನವನ್ನು ವಿಫಲಗೊಳಿಸಿದೆ.

ದಕ್ಷಿಣ ದೆಹಲಿಯ ಆರ್.ಕೆ. ಪುರಂ ಏರಿಯಾದಲ್ಲಿ ಈ ಘಟನೆ ನಡೆದಿದ್ದು, ಸೋಮ್ ವಿಹಾರ್ ನ ಅಪಾರ್ಟ್ಮೆಂಟ್ ಒಂದಕ್ಕೆ ಬಂದ 25 ವರ್ಷದ ಯುವಕ, ತಮ್ಮ ಫ್ಲಾಟ್ ನಲ್ಲಿ ಒಬ್ಬಂಟಿಯಾಗಿದ್ದ ಮಹಿಳೆ ಬಳಿ ಕೊರಿಯರ್ ಬಂದಿದೆ ಎಂದು ಹೇಳಿದ್ದಾನೆ.

ಇದನ್ನು ನಿಜವೆಂದು ನಂಬಿದ ಮಹಿಳೆ ಬಾಗಿಲು ತೆರೆಯುತ್ತಿದ್ದಂತೆಯೇ ಆಕೆಯನ್ನು ತಳ್ಳಿ ಕೆಳಗೆ ಬೀಳಿಸಿದ ಯುವಕ, ಹಲ್ಲೆ ಮಾಡಲು ಮುಂದಾಗಿದ್ದಾನೆ. ಆದರೆ ಮಹಿಳೆ ಮನೆಯಲ್ಲಿದ್ದ ಲ್ಯಾಬ್ರೆಡಾರ್ ನಾಯಿ ಜೋರಾಗಿ ಬೊಗಳತೊಡಗಿದೆಯಲ್ಲದೇ ಯುವಕನ ಮೇಲೆರೆಗಲು ಮುಂದಾಗಿದೆ. ಇದರಿಂದ ಗಾಬರಿಗೊಂಡ ಯುವಕ ಓಡಿ ಹೋಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಕಳ್ಳನ ಪತ್ತೆಗೆ ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...