alex Certify
ಕನ್ನಡ ದುನಿಯಾ       Mobile App
       

Kannada Duniya

ರೈತರಿಗೆ ಶುಭ ಸುದ್ದಿ ನೀಡಿದ ಅರುಣ್ ಜೇಟ್ಲಿ

ನವದೆಹಲಿ: ಕೃಷಿಯನ್ನು ಸಮರ್ಥ ಕ್ಷೇತ್ರವಾಗಿ ರೂಪಿಸಿ ರೈತರ ಆದಾಯವನ್ನು ದ್ವಿಗುಣಗೊಳಿಸಲಾಗುವುದು ಎಂದು ಕೇಂದ್ರ ಹಣಕಾಸು ಖಾತೆ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

2022 ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ಮಹಾತ್ವಾಕಾಂಕ್ಷಿ ಕಾರ್ಯವನ್ನು ಸರ್ಕಾರ ಕೈಗೆತ್ತಿಕೊಂಡಿದೆ ಎಂದು ತಿಳಿಸಿದ್ದಾರೆ.

ಭಾರತದಲ್ಲಿ ಜನಸಂಖ್ಯೆ ಅಪಾರ ಪ್ರಮಾಣದಲ್ಲಿದ್ದು, ಇವರೆಲ್ಲಾ ಕೃಷಿ ಕ್ಷೇತ್ರದ ಮೇಲೆ ಅವಲಂಬಿತಾಗಿದ್ದಾರೆ. ಕೃಷಿ ಕ್ಷೇತ್ರವನ್ನು ಸಮರ್ಥನೀಯವಾಗಿ ರೂಪಿಸಿ ರೈತ ಸಮೂಹದ ಶಕ್ತಿಯನ್ನು ಹೆಚ್ಚಿಸಲು, ಅವರ ಆದಾಯವನ್ನು ದ್ವಿಗುಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ದೇಶದ ಆರ್ಥಿಕ ಬೆಳವಣಿಗೆ ಕೃಷಿ ಕ್ಷೇತ್ರ ಪಾತ್ರ ಮಹತ್ವದ್ದು. ಈ ಸಮೂಹದ ಖರೀದಿ ಶಕ್ತಿಯನ್ನು ಹೆಚ್ಚಿಸುವುದು ಮುಖ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ನೀರಾವರಿ, ರಸ್ತೆ, ವಸತಿ, ವಿದ್ಯುನ್ಮಾನ ಯೋಜನೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ರೈತರಿಗೆ ಅಗತ್ಯವಾದ ಸಾಲಸೌಲಭ್ಯ, ಬಡ್ಡಿ ರಿಯಾಯ್ತಿ, ಬೆಳೆ ವಿಮೆ ಸೌಲಭ್ಯ ಸರಿಯಾಗಿ ಒದಗಿಸುವ ಬಗ್ಗೆ ನಿಗಾ ವಹಿಸಿದ್ದೇವೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...