alex Certify
ಕನ್ನಡ ದುನಿಯಾ       Mobile App
       

Kannada Duniya

ಕುಡಿದ ಮತ್ತಿನಲ್ಲಿ ಸಿಬ್ಬಂದಿಯಿಂದಲೇ ಮಹಿಳೆ ಜೊತೆ ಅಸಭ್ಯ ವರ್ತನೆ

ದೆಹಲಿಯಿಂದ ಪಟನಾಗೆ ತೆರಳುವ ರಾಜಧಾನಿ ಎಕ್ಸ್‌ಪ್ರೆಸ್‌ಲ್ಲಿ ಮಹಿಳೆ ಜತೆ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ಮೂವರನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಕೋಚ್‌ ಅಟೆಂಡೆಂಟ್‌ ಕಿಶೋರ್‌ ಕುಮಾರ್, ಬಂಟಿ ಕುಮಾರ್‌ ಹಾಗೂ ಪ್ರೀತಂ ಕುಮಾರ್‌ ಬಂಧಿತರು.

ದೆಹಲಿ ರೈಲು ನಿಲ್ದಾಣದಿಂದ ಹೊರಟ ಬಳಿಕ ಮಹಿಳೆ ಜತೆ ಮೂವರು ಅಸಭ್ಯವಾಗಿ ನಡೆದುಕೊಂಡಿದ್ದಾರೆ ಎಂದು ದೂರು ದಾಖಲಾಗಿದೆ. ಕಿಶೋರ್‌ ಕುಮಾರ್‌ ಪಾನಮತ್ತನಾಗಿದ್ದು, ಮಹಿಳೆಯ ಬಳಿ ಇದ್ದ ವಸ್ತುಗಳನ್ನು ಎಳೆಯಲು ಯತ್ನಿಸಿದ್ದಾನೆ. ಮತ್ತಿಬ್ಬರು ಮಹಿಳೆ ಜತೆ ಅಸಭ್ಯವಾಗಿ ನಡೆದುಕೊಂಡಿದ್ದಾರೆ. ಈ ವೇಳೆ ಮಹಿಳೆ ಪ್ರತಿರೋಧ ಒಡ್ಡಿದ್ದು, ತನ್ನನ್ನು ತಾನು ರಕ್ಷಿಸಿಕೊಂಡಿದ್ದಾಳೆ. ಬಳಿಕ ದೂರು ದಾಖಲಿಸಿದ್ದಾಳೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಜುಲೈ ತಿಂಗಳಲ್ಲಿ ಭಾರತೀಯ ಸೇನಾ ಪಡೆ ಯೋಧನೋರ್ವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ದೂರು ದಾಖಲಾಗಿತ್ತು. ಈ ಸಂಬಂಧ ರೈಲ್ವೆ ಪೊಲೀಸರು ಆರೋಪಿಯನ್ನು ದೀನ್‌ ದಯಾಲ್‌ ಉಪಾಧ್ಯಾಯ ಜಂಕ್ಷನ್‌ ನಿಲ್ದಾಣದಲ್ಲಿ ಬಂಧಿಸಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...