alex Certify
ಕನ್ನಡ ದುನಿಯಾ       Mobile App
       

Kannada Duniya

ಈ ಯುವತಿ ಮಾಡಿರುವ ಅವಾಂತರ ಕೇಳಿದ್ರೆ ಶಾಕ್ ಆಗ್ತೀರಿ

drunkgirl-worlipoliceಹಣದ ಮದ, ಮದ್ಯದ ಅಮಲು ಏನೆಲ್ಲಾ ಮಾಡಿಸುತ್ತದೆಂಬುದಕ್ಕೆ ಈ ಪ್ರಕರಣವೇ ಸಾಕ್ಷಿ. ಮದ್ಯದ ಅಮಲಿನಲ್ಲಿದ್ದ ಶ್ರೀಮಂತ ವ್ಯಕ್ತಿಯೊಬ್ಬನ ಪುತ್ರಿಯೊಬ್ಬಳು ಪೊಲೀಸ್ ಠಾಣೆಯಲ್ಲಿ ನಡೆಸಿರುವ ಅವಾಂತರ ಎಂತವರನ್ನೂ ಬೆಚ್ಚಿ ಬೀಳಿಸುತ್ತದೆ.

ಈ ತಿಂಗಳ ಆರಂಭದಲ್ಲಿ ಈ ಘಟನೆ ನಡೆದಿದ್ದು, ಅದರ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕಂಠ ಪೂರ್ತಿ ಕುಡಿದು ತನ್ನ ಇಬ್ಬರು ಗೆಳೆಯರ ಜೊತೆ ಕಾರ್ ಡ್ರೈವ್ ಮಾಡಿಕೊಂಡು ಬರುತ್ತಿದ್ದ ಯುವತಿಯೊಬ್ಬಳು ರಸ್ತೆಯ ಡಿವೈಡರ್ ಗೆ ಕಾರ್ ಗುದ್ದಿಸಿದ್ದಾಳೆ.

ರಾತ್ರಿ ಗಸ್ತು ತಿರುಗುತ್ತಿದ್ದ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ, ಯುವತಿ ಮತ್ತಾಕೆಯ ಗೆಳೆಯರನ್ನು ವರ್ಲಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲು ಮುಂದಾದ ವೇಳೆ ಅವರ ಮೇಲೆ ಯುವತಿ ಉಗಿದಿದ್ದಾಳೆ. ಅದೇಗೋ ಕಷ್ಟಪಟ್ಟು ಆಕೆಯನ್ನು ಠಾಣೆಗೆ ಕರೆದುಕೊಂಡು ಹೋಗಲಾಗಿದ್ದು, ಅಕ್ಷರಶಃ ಅಲ್ಲಿ ಆಕೆ ರಣಾಂಗಣವನ್ನೇ ಸೃಷ್ಟಿಸಿದ್ದಾಳೆ.

ಪೊಲೀಸರಿಗೆ ಕಾಲಿನಿಂದ ಒದ್ದಿದ್ದಾಳೆ ಜೊತೆಗೆ ಬಾಯಿಗೆ ಬಂದಂತೆ ಬೈದಿದ್ದಾಳೆ. ಅಲ್ಲಿದ್ದ ಕಂಪ್ಯೂಟರ್ ಹಾಗೂ ಇನ್ನಿತರ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾಳೆ. ಸಾಲದ್ದಕ್ಕೆ ಇದನ್ನೆಲ್ಲಾ ರೆಕಾರ್ಡ್ ಮಾಡಿಕೊಳ್ಳುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರ ಮೊಬೈಲ್ ಕಿತ್ತುಕೊಂಡು ನೆಲಕ್ಕೆ ಬಿಸಾಡಿದ್ದಾಳೆ. ಆಕೆಯನ್ನು ಹಿಡಿಯಲು ಎಷ್ಟೇ ಪ್ರಯತ್ನ ಪಟ್ಟರೂ ನಿಲ್ಲಲೂ ಆಗದ ಸ್ಥಿತಿಯಲ್ಲಿದ್ದ ಆಕೆಯನ್ನು ಕಡೆಗೂ ವೈದ್ಯಕೀಯ ಪರೀಕ್ಷೆ ಮಾಡಿಸಿ ಗೆಳೆಯರ ಜೊತೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆದರೆ ಅಂದೇ ಅವರೆಲ್ಲರೂ ಜಾಮೀನಿನ ಮೇಲೆ ಹೊರ ಬಂದಿದ್ದು, ಅವರ ಅಂದಿನ ದುಂಡಾವರ್ತನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...