alex Certify
ಕನ್ನಡ ದುನಿಯಾ       Mobile App
       

Kannada Duniya

ತಮಿಳುನಾಡು ಮುಖ್ಯಮಂತ್ರಿಯಾಗಿ ಪಳನಿಸ್ವಾಮಿ

edappadi-k-palaniswami-is-new-tamil-nadu-chief-ministerಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್ ಬೆಂಬಲಿತ ಅಭ್ಯರ್ಥಿ ಎಡಪ್ಪಾಡಿ ಪಳನಿಸ್ವಾಮಿಯವರಿಗೆ ಸರ್ಕಾರ ರಚಿಸಲು ಆಹ್ವಾನ ನೀಡುವ ಮೂಲಕ ತಮಿಳುನಾಡಿನ ಉಸ್ತುವಾರಿ ರಾಜ್ಯಪಾಲ ವಿದ್ಯಾಸಾಗರ ರಾವ್ ಕೆಲ ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಕ್ಕೆ ಕೊನೆಗೂ ತೆರೆ ಎಳೆದಿದ್ದಾರೆ.

ತಮ್ಮ ಬೆಂಬಲಿಗ ಶಾಸಕರೊಂದಿಗೆ ರೆಸಾರ್ಟ್ ನಲ್ಲಿ ಬೀಡು ಬಿಟ್ಟಿರುವ ಪಳನಿಸ್ವಾಮಿಯವರನ್ನು ರಾಜಭವನಕ್ಕೆ ಕರೆಸಿಕೊಂಡ ರಾಜ್ಯಪಾಲ ವಿದ್ಯಾಸಾಗರ ರಾವ್, ಈ ಹಿಂದೆ ಪಳನಿಸ್ವಾಮಿ ತಮಗೆ ನೀಡಿದ್ದ 124 ಶಾಸಕರ ಸಹಿಯುಳ್ಳ ಪತ್ರದ ಆಧಾರದ ಮೇಲೆ ಹೊಸ ಸರ್ಕಾರ ರಚಿಸಲು ಆಹ್ವಾನ ನೀಡಿದ್ದಾರೆ. 15 ದಿನಗಳೊಳಗಾಗಿ ಬಹುಮತ ಸಾಬೀತುಪಡಿಸುವಂತೆ ಸೂಚಿಸಿದ್ದಾರೆ.

ಪಳನಿಸ್ವಾಮಿಯವರಿಗೆ ರಾಜ್ಯಪಾಲರು ಆಹ್ವಾನ ನೀಡಿರುವ ಸುದ್ದಿ ಹೊರ ಬೀಳುತ್ತಿದ್ದಂತೆಯೇ ಎಐಎಡಿಎಂಕೆ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಎಡಪ್ಪಾಡಿ ಪಳನಿಸ್ವಾಮಿ ಮುಖ್ಯಮಂತ್ರಿಯಾಗಿ ಇಂದು ಸಂಜೆಯೇ ಅಧಿಕಾರ ಸ್ವೀಕರಿಸುವ ಸಾಧ್ಯತೆಯಿದ್ದು, ಬಳಿಕ ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ ಶಶಿಕಲಾ ನಟರಾಜನ್ ರನ್ನು ಭೇಟಿ ಮಾಡಲಿದ್ದಾರೆಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...