alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಕಾರ ರಚನೆಯ ಹಕ್ಕು ಮಂಡಿಸಿದ ಪಳನಿಸ್ವಾಮಿ

palni

ಚೆನ್ನೈ: ತಮಿಳುನಾಡು ರಾಜಕಾರಣ ಕ್ಷಣಕ್ಕೊಂದು ತಿರುವು ಪಡೆಯುತ್ತಿದ್ದು, ಎಡಪಾಡಿ ಪಳನಿಸ್ವಾಮಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

ಎ.ಐ.ಎ.ಡಿ.ಎಂ.ಕೆ. ಪಕ್ಷದ ಶಶಿಕಲಾ ನಟರಾಜನ್ ಬಣದಿಂದ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಎಡಪಾಡಿ ಪಳನಿಸ್ವಾಮಿ ರಾಜಭವನಕ್ಕೆ ತೆರಳಿ, ರಾಜ್ಯಪಾಲ ವಿದ್ಯಾಸಾಗರ ರಾವ್ ಅವರನ್ನು ಭೇಟಿ ಮಾಡಿದ್ದಾರೆ.

ಸುಮಾರು 15 ನಿಮಿಷಗಳ ಕಾಲ ರಾಜ್ಯಪಾಲರೊಂದಿಗೆ ಚರ್ಚಿಸಿದ ಅವರು, 112 ಶಾಸಕರ ಬೆಂಬಲ ತಮಗಿರುವುದರಿಂದ ಸರ್ಕಾರ ರಚನೆಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ. ಜೊತೆಗೆ ತಮಗೆ ಬೆಂಬಲ ನೀಡಿರುವ ಶಾಸಕರ ಸಹಿ ಇರುವ ಪತ್ರವನ್ನು ನೀಡಿದ್ದಾರೆ.

ಪಳನಿಸ್ವಾಮಿ ಅವರೊಂದಿಗೆ 10 ಶಾಸಕರು ಜೊತೆಗಿದ್ದರು. ಇದೇ ಸಂದರ್ಭದಲ್ಲಿ ರಾಜ್ಯಪಾಲರು, ಪನ್ನೀರ್ ಸೆಲ್ವಂ ಅವರ ಬಣ ಮತ್ತು ಬೆಳವಣಿಗೆಗಳ ಕುರಿತಾಗಿ ಪ್ರಶ್ನಿಸಿದ್ದಾರೆ.

ಪಳನಿಸ್ವಾಮಿ ಅವರೊಂದಿಗೆ ಚರ್ಚಸಿದ ರಾಜ್ಯಪಾಲರು ಯಾವುದೇ ಭರವಸೆಯನ್ನು ನೀಡಿಲ್ಲ ಎನ್ನಲಾಗಿದೆ. ನಾಳೆ ಮಧ್ಯಾಹ್ನದೊಳಗೆ ರಾಜ್ಯಪಾಲರು ತೀರ್ಮಾನ ಕೈಗೊಳ್ಳಲಿದ್ದು, ಪ್ರಸ್ತುತ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಕೇಂದ್ರಕ್ಕೆ ವರದಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...