alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಲೆಗಳಲ್ಲಿ ಯೋಗ ಶಿಕ್ಷಣ:ಅರ್ಜಿ ವಜಾಗೊಳಿಸಿದ ಸುಪ್ರೀಂ

sc_1502182465_618x347

ಒಂದನೇ ತರಗತಿಯಿಂದ 8ನೇ ತರಗತಿಯವರೆಗೆ ಯೋಗವನ್ನು ಕಡ್ಡಾಯಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು  ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಅರ್ಜಿಯಲ್ಲಿ ರಾಷ್ಟ್ರೀಯ ಯೋಗ ನೀತಿ ರಚಿಸುವ ಬಗ್ಗೆಯೂ ಒಪ್ಪಿಗೆ ಕೇಳಲಾಗಿತ್ತು. ಮಂಗಳವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ.

ನ್ಯಾಯಮೂರ್ತಿ ಎಂ.ಬಿ.ಲೋಕುರ್  ನೇತೃತ್ವದ ನ್ಯಾಯಪೀಠ, ಅರ್ಜಿಯನ್ನು ತಿರಸ್ಕರಿಸಿದ್ದಲ್ಲದೆ ಈ ವಿಚಾರದಲ್ಲಿ ಸರ್ಕಾರ ಮಾತ್ರ ನಿರ್ಧಾರ ತೆಗೆದುಕೊಳ್ಳಲು ಸಾಧ್ಯ ಎಂದಿದೆ. ಶಾಲೆಯಲ್ಲಿ ಏನನ್ನು ಕಲಿಸಬೇಕು ಏನನ್ನು ಕಲಿಸಬಾರದು ಎಂಬುದನ್ನು ನಿರ್ಧರಿಸುವವರು ನಾವಲ್ಲ. ಇದು ನಮ್ಮ ಕೆಲಸವಲ್ಲ. ನಾನು ಹೇಗೆ ಇದ್ರ ಬಗ್ಗೆ ನಿರ್ದೇಶನ ನೀಡಲು ಸಾಧ್ಯ ಎಂದು ಕೇಳಿದೆ.

ದೆಹಲಿ ಬಿಜೆಪಿ ವಕ್ತಾರ ಹಾಗೂ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ್ ಹಾಗೂ ಜೆ.ಸಿ. ಸೇಠ್ ಅರ್ಜಿ ಸಲ್ಲಿಸಿದ್ದರು. ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ, NCERT, NCTE ಮತ್ತು CBSE ಗೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಿದ್ದರು. ಒಂದನೇ ತರಗತಿಯಿಂದ 8ನೇ ತರಗತಿಯವರೆಗೆ ಯೋಗ ಮತ್ತು ಆರೋಗ್ಯ ಶಿಕ್ಷಣದ ಪುಸ್ತಕವನ್ನು ಕಡ್ಡಾಯ ಮಾಡುವಂತೆ ಕೋರಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಶಾಲೆ ಮಕ್ಕಳಿಗೆ ಯೋಗ ಕಡ್ಡಾಯ ಮಾಡುವುದು ಹಾಗೂ ರಾಷ್ಟ್ರೀಯ ಯೋಗ ನೀತಿ ಜಾರಿಗೆ ಸಂಬಂಧಿಸಿದಂತೆ ಆದೇಶ ನೀಡುವ ಮೌಖಿಕ ಅಧಿಕಾರವಿಲ್ಲವೆನ್ನುವ ಮೂಲಕ ಕೋರ್ಟ್ ಅರ್ಜಿ ವಜಾಗೊಳಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...