alex Certify
ಕನ್ನಡ ದುನಿಯಾ       Mobile App
       

Kannada Duniya

ಪಂಚ ರಾಜ್ಯಗಳ ಚುನಾವಣಾ ದಿನಾಂಕ ಇಂದು ಪ್ರಕಟ

election-commission-3

ಐದು ರಾಜ್ಯಗಳಲ್ಲಿ ಈ ಬಾರಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣಾ ಆಯೋಗ ಇಂದು ಐದು ರಾಜ್ಯಗಳಲ್ಲಿ ನಡೆಯುವ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಿದೆ. ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗ ಪತ್ರಿಕಾಗೋಷ್ಠಿ ನಡೆಸಲಿದೆ.

ಉತ್ತರ ಪ್ರದೇಶ, ಉತ್ತರಖಂಡ, ಪಂಜಾಬ್, ಗೋವಾ ಮತ್ತು ಮಣಿಪುರದಲ್ಲಿ ನಡೆಯುವ ಚುನಾವಣೆಗೆ ಚುನಾವಣಾ ಆಯೋಗ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ಪಂಜಾಬ್ ಹಾಗೂ ಉತ್ತರಖಂಡದಲ್ಲಿ ಮೊದಲು ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ನಾಲ್ಕು ಹಂತದಲ್ಲಿ ಹಾಗೂ ಉಳಿದ ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಫೆಬ್ರವರಿಯಲ್ಲಿ ಚುನಾವಣೆ ಶುರುವಾಗಲಿದ್ದು, ಮಾರ್ಚ್ ಮೊದಲ ವಾರದಲ್ಲಿ ಎಲ್ಲ ರಾಜ್ಯಗಳ ಚುನಾವಣೆ ಮುಗಿಸುವ ಯೋಜನೆಯನ್ನು ಚುನಾವಣಾ ಆಯೋಗ ರೂಪಿಸಿದೆ ಎನ್ನಲಾಗ್ತಾ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...