alex Certify
ಕನ್ನಡ ದುನಿಯಾ       Mobile App
       

Kannada Duniya

ಅಖಿಲೇಶ್, ಪರ್ಸೇಕರ್, ರಾವತ್ ರಾಜೀನಾಮೆ

aki-resign

ನವದೆಹಲಿ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ  ಸೋಲು ಕಂಡಿರುವುದರಿಂದ ಮುಖ್ಯಮಂತ್ರಿ ಅಖಿಲೇಶ್ ಸಿಂಗ್ ಯಾದವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿದ ಅವರು, ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನೊಂದಿಗೆ ಸಮಾಜವಾದಿ ಪಕ್ಷದ ಮೈತ್ರಿ ಮುಂದುವರೆಯಲಿದೆ. ಮುಂದಿನ ಸರ್ಕಾರವೂ ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಿಕೊಂಡು ಹೋಗಲಿದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಗೋವಾದಲ್ಲಿ ಮುಖ್ಯಮಂತ್ರಿ ಲಕ್ಷ್ಮಿಕಾಂತ್ ಪರ್ಸೇಕರ್ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಅದೇ ರೀತಿ ಉತ್ತರಾಖಂಡ್ ನಲ್ಲಿ ಸಿ.ಎಂ. ಹರೀಶ್ ರಾವತ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...