alex Certify
ಕನ್ನಡ ದುನಿಯಾ       Mobile App
       

Kannada Duniya

ಆಜಾನ್ ಕೇಳಿ ಭಾಷಣ ನಿಲ್ಲಿಸಿದ ಮೋದಿ

ನವದೆಹಲಿ: ಈಶಾನ್ಯ ಭಾರತದ ಮೇಘಾಲಯ, ತ್ರಿಪುರಾ, ನಾಗಾಲ್ಯಾಂಡ್ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿ.ಜೆ.ಪಿ. ಜಯಭೇರಿ ಬಾರಿಸಿರುವ ಹಿನ್ನಲೆಯಲ್ಲಿ ನವದೆಹಲಿಯ ಬಿ.ಜೆ.ಪಿ. ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಸಲಾಗಿದೆ.

ಸಂಭ್ರಮಾಚರಣೆ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬಿ.ಜೆ.ಪಿ. ವಿಜಯ ಯಾತ್ರೆಯ ಶಿಲ್ಪಿ ಅಮಿತ್ ಶಾ ಎಂದು ಹೇಳಿದ್ದಾರೆ. ಮತದಾರರು ಅವರ ನಿರ್ಧಾರದಂತೆಯೇ ಆಯ್ಕೆ ಮಾಡಿದ್ದಾರೆ. ಈಶಾನ್ಯ ರಾಜ್ಯಗಳ ಗೆಲುವಿನಿಂದ ಪಕ್ಷದ ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ಅಪಪ್ರಚಾರದ ನಡುವೆಯೂ ಈಶಾನ್ಯದ ರಾಜ್ಯಗಳಲ್ಲಿ ನಮಗೆ ಗೆಲುವಾಗಿದೆ. ಚುನಾವಣೆಯಲ್ಲಿ ಸೋಲು, ಗೆಲುವು ಸಹಜ. ಈ ಗೆಲುವು ಘರ್ಷಣೆಯಲ್ಲಿ ಮೃತಪಟ್ಟ ಪಕ್ಷದ ಕಾರ್ಯಕರ್ತರಿಗೆ ಅರ್ಪಣೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ವಿಜಯೋತ್ಸವ ಭಾಷಣ ಮಾಡುವ ಸಂದರ್ಭದಲ್ಲಿ ಆಜಾನ್ ಕೇಳಿ ಬಂದಿದ್ದು, ಭಾಷಣ ನಿಲ್ಲಿಸಿದ್ದಾರೆ. ಕೆಲ ನಿಮಿಷದ ಬಳಿಕ, ಭಾರತ್ ಮಾತಾ ಕೀ ಜೈ ಎಂದು ಭಾಷಣ ಆರಂಭಿಸಿ ಮಾತನಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...