alex Certify
ಕನ್ನಡ ದುನಿಯಾ       Mobile App
       

Kannada Duniya

ಮೂರು ರಾಜ್ಯಗಳ ಚುನಾವಣೆಗೆ ಮುಹೂರ್ತ ಫಿಕ್ಸ್

ತ್ರಿಪುರಾ, ನಾಗಾಲ್ಯಾಂಡ್ ಹಾಗೂ ಮೇಘಾಲಯ ವಿಧಾನಸಭೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮುಖ್ಯ ಚುನಾವಣಾ ಆಯುಕ್ತ ಎ.ಕೆ. ಜ್ಯೋತಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಪ್ರಕಟಿಸಿದ್ದಾರೆ.

ಮೂರೂ ರಾಜ್ಯಗಳಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ತ್ರಿಪುರಾದಲ್ಲಿ ಮತದಾನ ಫೆಬ್ರವರಿ 18ರಂದು ನಡೆಯಲಿದೆ. ಎರಡನೇ ಹಂತವಾಗಿ ನಾಗಾಲ್ಯಾಂಡ್ ಹಾಗೂ ಮೇಘಾಲಯದಲ್ಲಿ ಫೆಬ್ರವರಿ 27ರಂದು ಮತದಾನ ನಡೆಯಲಿದೆ. ಮಾರ್ಚ್ 3ರಂದು ಮೂರೂ ರಾಜ್ಯಗಳ ಫಲಿತಾಂಶ ಹೊರಬೀಳಲಿದೆ.

ಚುನಾವಣೆಗೆ ಇವಿಎಂ ಹಾಗೂ ವಿವಿಪಾಟ್ ಬಳಕೆ ಮಾಡುವುದಾಗಿ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಅಭ್ಯರ್ಥಿಗಳಿಗೆ ಇವಿಎಂ ಪರಿಶೀಲನೆ ಮಾಡಲು ಚುನಾವಣಾ ಆಯೋಗ ಅವಕಾಶ ನೀಡಿದೆ. ಮೂರೂ ರಾಜ್ಯಗಳಲ್ಲಿ 60-60 ವಿಧಾನಸಭಾ ಸೀಟ್ ಇದ್ದು, ಮಾರ್ಚ್ ನಲ್ಲಿ ವಿಧಾನಸಭೆ ಅಧಿಕಾರಾವಧಿ ಮುಕ್ತಾಯವಾಗಲಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...