alex Certify
ಕನ್ನಡ ದುನಿಯಾ       Mobile App
       

Kannada Duniya

2 ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಮುಂದಾದವರಿಗೆ ಶಾಕಿಂಗ್ ನ್ಯೂಸ್

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ಏರತೊಡಗಿದ್ದು, ಕೆಲವು ನಾಯಕರು 2 ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಪ್ಲಾನ್ ಮಾಡಿಕೊಂಡಿದ್ದಾರೆ.

ಇದೇ ವೇಳೆ ಕೇಂದ್ರ ಚುನಾವಣಾ ಆಯೋಗ, ಒಂದೇ ಕ್ಷೇತ್ರದಲ್ಲಿ ಸ್ಪರ್ಧೆಗೆ ನಿರ್ಬಂಧ ಹೇರಬೇಕೆಂದು ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದೆ. ಒಬ್ಬರು 1 ಕ್ಷೇತ್ರದಲ್ಲಿ ಮಾತ್ರ ಸ್ಪರ್ಧಿಸಬೇಕು. ಮತ್ತೊಂದು ಕ್ಷೇತ್ರದಲ್ಲಿ ಸ್ಪರ್ಧಿಸಿದಲ್ಲಿ ಉಪ ಚುನಾವಣೆಯ ವೆಚ್ಚವನ್ನು ಅಭ್ಯರ್ಥಿಯೇ ಭರಿಸಬೇಕೆಂದು ಅಫಿಡವಿಟ್ ಸಲ್ಲಿಸಲಾಗಿದೆ.

ಕಳೆದ ವರ್ಷ ಡಿಸೆಂಬರ್ ನಲ್ಲಿ ಅಶ್ವಿನ್ ಉಪಾಧ್ಯಾಯ ಅವರು ಸಲ್ಲಿಸಿದ್ದ ಪಿ.ಐ.ಎಲ್. ನ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಈ ಕುರಿತು ನಿಲುವು ತಿಳಿಸುವಂತೆ ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿತ್ತು.

ಈ ನೋಟಿಸ್ ಗೆ ಅಭಿಪ್ರಾಯ ತಿಳಿಸಿರುವ ಆಯೋಗ, ಒಬ್ಬ ಅಭ್ಯರ್ಥಿ 2 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದರೆ, ಉಪ ಚುನಾವಣೆ ವೆಚ್ಚವನ್ನು ಅಭ್ಯರ್ಥಿಯೇ ಭರಿಸಬೇಕೆಂದು ತನ್ನ ನಿಲುವು ತಿಳಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...