alex Certify
ಕನ್ನಡ ದುನಿಯಾ       Mobile App
       

Kannada Duniya

ತ್ರಿಪುರಾ ವಿಧಾನಸಭಾ ಚುನಾವಣೆ: ಬಿಜೆಪಿ-ಸಿಪಿಎಂ ಮಧ್ಯೆ ಬಿಗ್ ಫೈಟ್

ತ್ರಿಪುರಾದಲ್ಲಿಂದು ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಒಟ್ಟು 60 ಕ್ಷೇತ್ರಗಳ ಪೈಕಿ 59 ಕ್ಷೇತ್ರಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಸಿಪಿಎಂ ಅಭ್ಯರ್ಥಿಯ ನಿಧನದ ಹಿನ್ನೆಲೆಯಲ್ಲಿ ಚಾರ್ಲಿಮನ್ ಕ್ಷೇತ್ರಕ್ಕೆ ಮಾರ್ಚ್ 12ರಂದು ಮತದಾನ ನಡೆಯಲಿದೆ.

ಕಳೆದ 25 ವರ್ಷಗಳಿಂದ ತ್ರಿಪುರಾದಲ್ಲಿ ಆಡಳಿತ ಚುಕ್ಕಾಣಿ ಹಿಡಿದಿರುವ ಎಡಪಕ್ಷಗಳಿಗೆ ಬಿಜೆಪಿ ಪ್ರಬಲ ಪೈಪೋಟಿ ಒಡ್ಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಸರಿ ಪಕ್ಷ ಭರ್ಜರಿ ಪ್ರಚಾರ ಕೈಗೊಂಡಿತ್ತು. ಮೋದಿ 4 ಸಮಾವೇಶಗಳನ್ನು ನಡೆಸುವ ಮೂಲಕ ಮತಯಾಚಿಸಿದ್ದರು.

ಅಮಿತ್ ಶಾ, ರಾಜನಾಥ್ ಸಿಂಗ್, ಸ್ಮೃತಿ ಇರಾನಿ, ಯೋಗಿ ಆದಿತ್ಯನಾಥ್, ಅರುಣ್ ಜೇಟ್ಲಿ ಸೇರಿದಂತೆ ಬಿಜೆಪಿ ಘಟಾನುಘಟಿ ನಾಯಕರು ಪ್ರಚಾರ ನಡೆಸಿದ್ದಾರೆ. ಇನ್ನೊಂದೆಡೆ ಸಿಪಿಎಂ ನಾಯಕ ಮಾಣಿಕ್ ಸರ್ಕಾರ್ 5ನೇ ಬಾರಿಗೆ ಮುಖ್ಯಮಂತ್ರಿ ಪಟ್ಟ ಅಲಂಕರಿಸುವ ಹವಣಿಕೆಯಲ್ಲಿದ್ದಾರೆ.

ಬರೋಬ್ಬರಿ 50 ರ್ಯಾಲಿಗಳನ್ನು ನಡೆಸುವ ಮೂಲಕ ಮಾಣಿಕ್ ಸರ್ಕಾರ್, ತಮ್ಮನ್ನು ಮತ್ತೆ ಅಧಿಕಾರಕ್ಕೆ ತರುವಂತೆ ಮತದಾರರಲ್ಲಿ ಮನವಿ ಮಾಡಿದ್ದರು. ತ್ರಿಪುರಾದಲ್ಲಿ ಕಾಂಗ್ರೆಸ್ ಪ್ರಚಾರ ಭರಾಟೆ ಅಷ್ಟೇನೂ ಜೋರಾಗಿರಲಿಲ್ಲ. ಬಹಿರಂಗ ಪ್ರಚಾರದ ಕೊನೆಯ ದಿನ ರಾಹುಲ್ ಗಾಂಧಿ ಸಮಾವೇಶ ನಡೆಸಿ ಮತಯಾಚಿಸಿದ್ದರು.

59 ಕ್ಷೇತ್ರಗಳಿಂದ ಒಟ್ಟು 307 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸಿಪಿಎಂ 57 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. ಕಾಂಗ್ರೆಸ್ 59 ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬಿಜೆಪಿ ಇಂಡಿಜೀನಿಯಸ್ ಪೀಪಲ್ಸ್ ಫ್ರಂಟ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡು 51 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...