alex Certify
ಕನ್ನಡ ದುನಿಯಾ       Mobile App
       

Kannada Duniya

ಉತ್ತರಖಂಡ ರಾಜಕೀಯದ ಬಗ್ಗೆ ರಾಮ್ದೇವ್ ಭವಿಷ್ಯ

voting11-580x395

ಉತ್ತರಖಂಡದ 69 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಹರಿದ್ವಾರದಲ್ಲಿ ತಮ್ಮ ಹಕ್ಕು ಚಲಾಯಿಸಿದ ಯೋಗಗುರು ಬಾಬಾ ರಾಮ್ದೇವ್ ಚುನಾವಣೆ ಫಲಿತಾಂಶದ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ಚುನಾವಣೆ ಫಲಿತಾಂಶದ ಬಗ್ಗೆ ಮಾತನಾಡಿದ ಬಾಬಾ ರಾಮ್ದೇವ್, ಈ ಬಾರಿ ಚುನಾವಣೆಯಲ್ಲಿ ದೊಡ್ಡ ರಾಜಕೀಯ ಕ್ರಾಂತಿಯಾಗಲಿದೆ ಎಂದಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಪ್ತರಲ್ಲಿ ಒಬ್ಬರೆಂದು ಗುರುತಿಸಿಕೊಂಡಿರುವ ಬಾಬಾ ರಾಮ್ದೇವ್, ಮತದಾನದ ಬಳಿಕ ಯಾವುದೇ ಪಕ್ಷದ ಹೆಸರನ್ನು ಹೇಳಲಿಲ್ಲ. ಮತದಾನದ ವೇಳೆ ಪಕ್ಷದ ಹೆಸರು ಬೇಡ ಎಂದ ಯೋಗಗುರು, ದೇಶದ ಜನರು ವಿವೇಕವುಳ್ಳವರು. ಸರಿಯಾದ ವ್ಯಕ್ತಿಗೆ ಮತ ಹಾಕ್ತಾರೆ ಎಂದಿದ್ದಾರೆ.

ಎಲ್ಲರಿಗೂ ಮತ ಚಲಾಯಿಸುವಂತೆ ವಿನಂತಿ ಮಾಡಿಕೊಂಡ ಬಾಬಾ, ಉತ್ತರ ಪ್ರದೇಶ ಚುನಾವಣೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಯಾವುದೇ ಉತ್ತರ ನೀಡಲಿಲ್ಲ. ಉತ್ತರಖಂಡದಲ್ಲಿ ರಾಜಕೀಯ ಕ್ರಾಂತಿಯಾಗಲಿದೆ ಎಂದಷ್ಟೇ ಹೇಳಿಕೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...