alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಕಾರಿ ನೌಕರರಿಗೊಂದು ಸಂತಸದ ಸುದ್ದಿ

Indian_rupees

ನವದೆಹಲಿ: ವೇತನ ಆಯೋಗದ ವರದಿಯ ಕುರಿತಂತೆ ಸರ್ಕಾರಿ ನೌಕರರಿಗೆ ಖುಷಿಯ ವಿಚಾರವೊಂದು ಇಲ್ಲಿದೆ ನೋಡಿ. ವೇತನ, ಭತ್ಯೆ ಹೆಚ್ಚಳ ಮಾಡಬೇಕೆಂದು ಸರ್ಕಾರಿ ನೌಕರರು ಮಾಡಿದ ಮನವಿಗೆ ಪೂರಕ ಸ್ಪಂದನೆ ವ್ಯಕ್ತವಾಗಿದೆ.

ಕೇಂದ್ರ ಸರ್ಕಾರಿ ನೌಕರರು, 7 ನೇ ವೇತನ ಆಯೋಗದ ವರದಿಯ ಕುರಿತಂತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೇ, ವರದಿಯಲ್ಲಿ ನೌಕರರಿಗೆ ಅನುಕೂಲವಾದ ಅಂಶಗಳಿಲ್ಲ ಎಂದು ದೂರಿದ್ದಲ್ಲದೇ, ಮುಷ್ಕರ ನಡೆಸಲು ಚಿಂತನೆ ನಡೆಸಿದ್ದರು. ಇದೀಗ ಬಂದಿರುವ ಮಾಹಿತಿಯಂತೆ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿಯೊಂದು ಬಂದಿದೆ. 7ನೇ ವೇತನ ಆಯೋಗದ ಶಿಫಾರಸ್ಸುಗಳ ಕುರಿತಂತೆ ಕಾರ್ಯದರ್ಶಿಗಳ ಉನ್ನತಾಧಿಕಾರ ಸಮಿತಿ ಪರಿಶೀಲನೆ ನಡೆಸಿದೆ ಎಂದು ಹೇಳಲಾಗಿದೆ.

ಪರಿಶೀಲನೆ ಸಂದರ್ಭದಲ್ಲಿ ಆಯೋಗ ಶಿಫಾರಸ್ಸು ಮಾಡಿರುವುದಕ್ಕಿಂತ ಹೆಚ್ಚಿನ ವೇತನ ನೀಡಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಆಯೋಗ ಶೇ.23ರಷ್ಟು ವೇತನ ಹೆಚ್ಚಳಕ್ಕೆ ಶಿಫಾರಸ್ಸು ಮಾಡಿದ್ದು, ಅದನ್ನು ಶೇ.30ರಷ್ಟು ಹೆಚ್ಚಳ ಮಾಡಲು ಮತ್ತು ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೊಳಿಸಲು ಚಿಂತಿಸಲಾಗಿದೆ ಎಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...