alex Certify
ಕನ್ನಡ ದುನಿಯಾ       Mobile App
       

Kannada Duniya

ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದಿದ್ದ ಟೆಕ್ಕಿಗೆ ಗಲ್ಲು

ತಮಿಳುನಾಡಿನಲ್ಲಿ ನಡೆದಿದ್ದ 7 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಚೀಪುರಂ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಅಪರಾಧಿ 23 ವರ್ಷದ ದಶ್ವಂತ್ ಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.

ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ದಶ್ವಂತ್ ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದು, ಈತ ಫೆಬ್ರವರಿ 2017 ರಂದು ತನ್ನ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿದ್ದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಬಳಿಕ ಕತ್ತು ಹಿಸುಕಿ ಹತ್ಯೆ ಮಾಡಿದ್ದಲ್ಲದೇ ಶವವನ್ನು ಚೀಲದಲ್ಲಿ ಕಟ್ಟಿ ಹೈವೇ ಬಳಿ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದ.

ಸಾಂದರ್ಭಿಕ ಸಾಕ್ಷ್ಯಗಳನ್ನಾಧರಿಸಿ ದಶ್ವಂತ್ ನನ್ನು ಪೊಲೀಸರು ಬಂಧಿಸಿದ್ದರಾದರೂ ಯಾವುದೇ ಪ್ರತ್ಯಕ್ಷ ಸಾಕ್ಷಿ ಇರಲಿಲ್ಲ. ಆದರೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಡಿಎನ್ಎ ಫಲಿತಾಂಶ ಹಾಗೂ ಯುವಕನ ರೂಮಿನಲ್ಲಿ ಪತ್ತೆಯಾಗಿದ್ದ ಬಾಲಕಿಯ ಆಭರಣಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಆಘಾತಕಾರಿ ಸಂಗತಿಯೆಂದರೆ ವಿಚಾರಣೆ ಸಂದರ್ಭದಲ್ಲಿ ತಂದೆ ನೀಡಿದ ಜಾಮೀನಿನ ಮೇಲೆ ಹೊರ ಬಂದಿದ್ದ ಆರೋಪಿ ದಶ್ವಂತ್, ಹಣಕ್ಕಾಗಿ ತನ್ನ ಸ್ವಂತ ತಾಯಿ ಸರಳಾರನ್ನೇ ಹತ್ಯೆ ಮಾಡಿ ಮುಂಬೈಗೆ ಪರಾರಿಯಾಗಿದ್ದ. ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದ ಪೊಲೀಸರು ಪುನಃ ಜೈಲಿಗಟ್ಟಿದ್ದರು. ಇದೀಗ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ತೀರ್ಪು ಹೊರ ಬಿದ್ದಿದ್ದು, ದಶ್ವಂತ್ ಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ದಶ್ವಂತ್ ತನ್ನ ತಾಯಿ ಸರಳಾರನ್ನು ಹತ್ಯೆ ಮಾಡಿದ್ದ ಪ್ರಕರಣದ ವಿಚಾರಣೆ ಇನ್ನೂ ನಡೆಯುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...